ಶ್ರೀನಗರ: ಲೋಕಸಭೆ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗೆಲುವು ಸಾಧಿಸಬೇಕೆಂಬ ಉದ್ದೇಶದಿಂದ ಪುಲ್ವಾಮಾ ಆತ್ಮಾಹುತಿ ಬಾಂಬ್ ದಾಳಿಯನ್ನು ಕೇಂದ್ರ ಸರ್ಕಾರ ತಡೆಯಲಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ನ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಗಂಭೀರ ಆರೋಪ ಮಾಡಿದ್ದಾರೆ.
ಪುಲ್ವಾಮಾ ದಾಳಿಯ ಕುರಿತು ಕೇಂದ್ರ ಸರ್ಕಾರಕ್ಕೆ ಮೊದಲೇ ಮಾಹಿತಿ ಇತ್ತು. ದಾಳಿಯಲ್ಲಿ ಬಳಸಲಾದ ಸ್ಫೋಟಕಗಳು ಎಲ್ಲಿಂದ ಬಂದಿದ್ದವು ಎಂಬುದು ತಿಳಿದಿತ್ತು. ಆದರೆ ನರೇಂದ್ರ ಮೋದಿ ಅವರು ಈ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂಬ ಕಾರಣದಿಂದ ಪುಲ್ವಾಮಾ ದಾಳಿ ನಡೆಯಲು ಅನುವು ಮಾಡಿಕೊಟ್ಟಿತು ಎಂದು ಫಾರೂಕ್ ಅಬ್ದುಲ್ಲಾ ಶ್ರೀನಗರದಲ್ಲಿ ಆರೋಪಿಸಿದ್ದಾರೆ.
ಹೆದ್ದಾರಿ ಬಂದ್ ಕುರಿತು ಪ್ರತಿಕ್ರಿಯೆ ನೀಡಿದ ಫಾರೂಕ್ ಅಬ್ದುಲ್ಲಾ ‘ನಮ್ಮದಲ್ಲದ ತಪ್ಪಿಗೆ ನಮಗೆ ಶಿಕ್ಷೆ ನೀಡಲಾಗುತ್ತಿದೆ. ನಾವು ಸ್ವತಂತ್ರ ದೇಶದಲ್ಲಿ ವಾಸಿಸುತ್ತಿದ್ದೇವೋ ಅಥವಾ ವಸಾಹತುವಿನಲ್ಲಿ ವಾಸಿಸುತ್ತಿದ್ದೇವೋ ತಿಳಿಯುತ್ತಿಲ್ಲ. ಕೇಂದ್ರ ಸರ್ಕಾರ ರಾಜ್ಯದಲ್ಲಿ ಹೋರಾಟ ತೀವ್ರಗೊಳ್ಳುವ ಮುನ್ನ ತನ್ನ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು. (ಏಜೆನ್ಸೀಸ್)