'INDIA' ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆ! ಎನ್‌ಡಿಎ ಮೈತ್ರಿಕೂಟ ಸೇರ್ತಾರಾ ಫಾರೂಕ್ ಅಬ್ದುಲ್ಲಾ

arooq Abdullah
Published on

ಶ್ರೀನಗರ: ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಮೈತ್ರಿಕೂಟದ ಫ್ರಂಟ್‌ಲೈನ್‌ನಲ್ಲಿದ್ದ ನಾಯಕರೇ ಶಾಕ್ ಮೇಲೆ ಶಾಕ್ ಕೊಡ್ತಿದ್ದಾರೆ.

ಫಾರೂಕ್ ಅಬ್ದುಲ್ಲಾ ಸಾರಥ್ಯದ ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷ ಇಂಡಿ ಮೈತ್ರಿ ಕೂಟಕ್ಕೆ ಕೈ ಕೊಟ್ಟಿದೆ. ಮುಂಬರುವ ಲೋಕಸಭಾ ಚುನಾವಣೆ ವೇಳೆ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಏಕಾಂಗಿಯಾಗಿ ಹೋರಾಟ ಮಾಡೋದಾಗಿ ನ್ಯಾಷನಲ್ ಕಾನ್ಫರೆನ್ಸ್ ಘೋಷಣೆ ಮಾಡಿದೆ.

ಆದರೆ, ಬಿಜೆಪಿ ಸಾರಥ್ಯದ ಎನ್‌ಡಿಎ ಮೈತ್ರಿ ಕೂಟ ಸೇರುವ ಸುಳಿವನ್ನೂ ನ್ಯಾಷನಲ್ ಕಾನ್ಫರೆನ್ಸ್‌ ನಾಯಕರು ನೀಡಿದ್ದಾರೆ. ಇಂಡಿಯಾ ಮೈತ್ರಿಕೂಟ ಜೊತೆ ಸೀಟು ಹಂಚಿಕೆಯ ಮಾತುಕತೆ ವಿಫಲವಾಗಿದೆ ಎಂದು ಹಿರಿಯ ಜೆ&ಕೆ ನಾಯಕ ಹೇಳಿದ್ದಾರೆ. ಸೀಟು ಹಂಚಿಕೆಗೆ ಸಂಬಂಧಿಸಿದಂತೆ, ನ್ಯಾಷನಲ್ ಕಾನ್ಫರೆನ್ಸ್ ತನ್ನ ಸ್ವಂತ ಬಲದ ಮೇಲೆ ಚುನಾವಣೆಯಲ್ಲಿ ಸ್ಪರ್ಧಿಸುತ್ತದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಅದರಲ್ಲಿ ಎರಡು ಅಭಿಪ್ರಾಯಗಳಿಲ್ಲ ಎಂದು ಅಬ್ದುಲ್ಲಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇಂಡಿಯಾ ಬ್ಲಾಕ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವಿನ ಬಿರುಕುಗಳು ಕಳೆದ ತಿಂಗಳಿನಿಂದಲೇ ಗೋಚರಿಸುತ್ತಿವೆ. ಸೀಟು ಹಂಚಿಕೆ ಸೂತ್ರವನ್ನು ಶೀಘ್ರವಾಗಿ ನಿರ್ಧರಿಸದಿದ್ದರೆ ಕೆಲವು ವಿರೋಧ ಪಕ್ಷಗಳು ಪ್ರತ್ಯೇಕ ಮೈತ್ರಿ ಮಾಡಿಕೊಳ್ಳಬಹುದು ಎಂದು ಜನವರಿಯಲ್ಲಿ ಮಾಜಿ ಮುಖ್ಯಮಂತ್ರಿ ಹೇಳಿದ್ದರು.

ಕಳೆದ ತಿಂಗಳು, ಜಮ್ಮು ಪ್ರದೇಶದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನ ಹಲವಾರು ಪ್ರಮುಖ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಇದೇ ವೇಳೆ, ಎನ್‌ಡಿಎ ಮೈತ್ರಿ ಕೂಟಕ್ಕೆ ಮತ್ತೆ ಸೇರ್ಪಡೆ ಆಗಬಹುದೇ ಎಂಬ ಪ್ರಶ್ನೆಯನ್ನು ತಳ್ಳಿ ಹಾಕಲಿಲ್ಲ! ಈ ಮೂಲಕ ಫಾರೂಕ್ ಅಬ್ದುಲ್ಲಾ ಜಾಣ ರಾಜಕೀಯ ನಡೆ ಅನುಸರಿಸಿದ್ದಾರೆ. ಮುಸ್ಲಿಂ ನಾಯಕನ ನಡೆಯಿಂದಾಗಿ ಕಾಂಗ್ರೆಸ್ ಬೆಚ್ಚಿಬಿದ್ದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net