More

    ಫಸಲ್ ಬಿಮಾ ಯೋಜನೆ ಅನುಷ್ಠಾನ

    ಧಾರವಾಡ: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಜಿಲ್ಲೆಯಾದ್ಯಂತ ಈವರೆಗೆ 46,863 ರೈತರು ವಿವಿಧ ಬೆಳೆಗಳಿಗೆ ಪ್ರೀಮಿಯಂ ಪಾವತಿಸಿ ನೋಂದಣಿ ಮಾಡಿಕೊಂಡಿದ್ದಾರೆ. ಕೆಂಪು ಮೆಣಸಿನಕಾಯಿ ಹೊರತುಪಡಿಸಿ ಉಳಿದ ಎಲ್ಲ ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು ಜು. 31 ಕೊನೆಯ ದಿನ. ಕೆಂಪು ಮೆಣಸಿನಕಾಯಿ ಬೆಳೆಗೆ ಆ. 16 ಕೊನೆಯ ದಿನ. ರೈತರು ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿ ನೋಂದಣಿ ಮಾಡಿಕೊಂಡಲ್ಲಿ ಹೆಚ್ಚಿನ ಮಳೆಯಿಂದ ಹಾನಿ ಮತ್ತು ಇತರ ಕಾರಣಗಳಿಂದ ಬೆಳೆ ಹಾನಿಯಾದ ಸಂದರ್ಭಗಳಲ್ಲಿ ವಿಮಾ ಪರಿಹಾರ ಸುರಕ್ಷತೆ ಪಡೆಯಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಡಾ. ಎಂ. ಕಿರಣಕುಮಾಋ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts