More

    ರೈತರನ್ನು ಆರ್ಥಿಕವಾಗಿ ರಕ್ಷಿಸಲಿದೆ ಬಿಮಾ ಯೋಜನೆ

    ರಾಯಚೂರು: ರೈತರಿಗೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ಪೂರೈಕೆ ಮಾಡುವುದರೊಂದಿಗೆ ಕೃಷಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಕುರಿತು ರೈತರಿಗೆ ಮಾಹಿತಿಯನ್ನು ಅಧಿಕಾರಿಗಳು ಸಮರ್ಪಕವಾಗಿ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಸೂಚನೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ಫಸಲ್ ಬಿಮಾ ಯೋಜನೆ ಸಭೆಯ ಅಧ್ಯಕ್ಷತೆ ವಹಿಸಿ ಶುಕ್ರವಾರ ಮಾತನಾಡಿದರು. ರೈತ ಸಂಪರ್ಕ ಕೇಂದ್ರ, ಖಾಸಗಿ ಅಂಗಡಿಗಳಲ್ಲಿನ ಬಿತ್ತನೆ ಬೀಜಗಳ ಗುಣಮಟ್ಟ ಪರಿಶೀಲಿಸಬೇಕು ಎಂದು ಸೂಚಿಸಿದರು.

    ಅಂಗಡಿಗಳಲ್ಲಿ ದರಪಟ್ಟಿ ಫಲಕ ಅಳವಡಿಸಿ

    ರೈತ ಸಂಪರ್ಕ ಕೇಂದ್ರಗಳು ಮತ್ತು ಖಾಸಗಿ ಅಂಗಡಿಗಳಲ್ಲಿ ಕೃಷಿ ಪರಿಕರಗಳು, ಬಿತ್ತನೆ ಬೀಜ, ರಸಗೊಬ್ಬರ ದರಪಟ್ಟಿ ಫಲಕ ಅಳವಡಿಸಲು ಕ್ರಮಕೈಗೊಳ್ಳಬೇಕು. ಬಿತ್ತನೆ ವಿಧಾನ ಕುರಿತು ರೈತರಿಗೆ ಆಯಾ ತಾಲೂಕಿನ ಕೃಷಿ ಸಹಾಯಕ ನಿರ್ದೇಶಕರು ಜಾಗೃತಿ ಮೂಡಿಸಬೇಕು ಎಂದರು.

    ಇದನ್ನೂ ಓದಿ: CEO ಕೆಲಸ ತೊರೆದು ಟ್ರಕ್ ಡ್ರೈವರ್ ಆದ ವ್ಯಕ್ತಿ ಕ್ಯಾನ್ಸರ್ ಸೋಲಿಸಿದರು

    ಫಸಲ್ ಬಿಮಾ ಸರ್ಕಾರದ ಮಹತ್ತರ ಯೋಜನೆಯಾಗಿದ್ದು, ಬೆಳೆ ನಷ್ಟವಾದಾಗ ರೈತರನ್ನು ಆರ್ಥಿಕವಾಗಿ ರಕ್ಷಿಸಲಿದೆ. ಯೋಜನೆಯಡಿ ವಿಮಾ ಕಂತು ಪಾವತಿ ಮಾಡಿದ ರೈತರ ಬದಲಿಗೆ ಬೇರೆಯವರ ಖಾತೆಗೆ ಪರಿಹಾರದ ಹಣ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಡಿಸಿ ಚಂದ್ರಶೇಖರ ನಾಯಕ ತಾಕೀತು ಮಾಡಿದರು. ಫಸಲ್ ಬಿಮಾ ಯೋಜನೆಯ ಮಾಹಿತಿ ರಥಕ್ಕೆ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರಗೇಶ ಹಸಿರು ನಿಶಾನೆ ತೋರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts