More

    ಫಸಲು ಬಿಮಾ ಯೋಜನೆ ರೈತರಿಗೆ ಸಹಕಾರಿ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿಕೆ

    ಮಂಡ್ಯ: ಅತಿವೃಷ್ಟಿ ಹಾಗೂ ಅನಾವೃಷ್ಟಿ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಭದ್ರತೆ ಒದಗಿಸಲು ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಸಹಕಾರಿಯಾಗಿದೆ. ರೈತರನ್ನು ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸಲಹೆ ನೀಡಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಫಸಲ್ ಬಿಮಾ ಯೋಜನೆಯ ಪ್ರಚಾರ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು. 2022-23ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸಲು ದಿನಾಂಕವನ್ನು ನಿಗದಿಪಡಿಸಲಾಗಿದ್ದು, ರೈತರು ವಿಮಾ ಕಂತುಗಳನ್ನು ಪಾವತಿಸಲಾಗಿದೆ. 2022-23ನೇ ಸಾಲಿನ ಮುಂಗಾರು ಹಂಗಾಮಿನಿಲ್ಲಿ 31,687 ರೈತರು 67.53 ಲಕ್ಷ ರೂ. ಮೊತ್ತದ ವಿಮೆ ಪಾವತಿಸಿದ್ದು, 27077 ಎಕರೆ ಪ್ರದೇಶದ ಬೆಳೆಗಳಿಗೆ ವಿಮೆ ನೋಂದಣಿ ಮಾಡಲಾಗಿದೆ ಎಂದರು.
    ಜಂಟಿ ಕೃಷಿ ನಿರ್ದೇಶಕ ಅಶೋಕ್ ಮಾತನಾಡಿ, ಈ ವರ್ಷ ಅತಿವೃಷ್ಟಿಯಿಂದ ಪ್ರತಿ ಹಂತದಲ್ಲೂ ರೈತರಿಗೆ ತೊಂದರೆಯಾಗುತ್ತಿದೆ. ಬದಲಾಗುತ್ತಿರುವ ಹವಾಮಾನದಲ್ಲಿ ಫಸಲ್ ಬಿಮಾ ಯೋಜನೆ ಹೆಚ್ಚು ಉಪಯುಕ್ತವಾಗಿದೆ. ಒಂದು ಎಕರೆ ರಾಗಿಗೆ 231 ರೂ. ಪಾವತಿಸಿ 15,379 ರೂ. ವಿಮೆಗೆ ನೋಂದಣಿ ಮಡಿಕೊಳ್ಳಬಹುದು. ಕಳೆದ 3 ವರ್ಷಗಳಲ್ಲಿ ಜಿಲ್ಲೆಯ ಎಲ್ಲ ಹಂಗಾಮುಗಳಲ್ಲಿ 55,571 ರೈತರು 47,286 ಎಕರೆ ಪ್ರದೇಶದ ಬೆಳೆಗಳಿಗೆ ವಿಮೆ ಮಾಡಿಸಲಾಗಿದ್ದು, 1.37 ಕೋಟಿ ರೂ. ಪ್ರೀಮಿಯಂ ಪಾವತಿ ಮಾಡಿದ್ದಾರೆ. ಅದರಂತೆ 21.46 ಕೋಟಿ ರೂ. ಪರಿಹಾರ ಪಡೆದಿದ್ದಾರೆ. ವಿಮೆಗೆ ಸಂಬಂಧಿಸಿದಂತೆ ರೈತರು ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದರು.
    ಜಿಪಂ ಸಿಇಒ ಶಾಂತಾ ಎಲ್.ಹುಲ್ಮನಿ, ಕೃಷಿ ಇಲಾಖೆ ಹರ್ಷ, ಪ್ರತಿಭಾ, ಸೌಮ್ಯಶ್ರೀ, ಅಂಬಿಕಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts