ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯ ಕಲ್ಪಿಸಿ

blank

ಸಂಡೂರು: ಪಟ್ಟಣದ 1ನೇ ವಾರ್ಡ್, ತಾಲೂಕಿನ ಕೃಷ್ಣಾನಗರ, ಲಕ್ಷ್ಮೀಪುರ, ಚೋರುನೂರು, ಬಂಡ್ರಿ ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ರಷ್ಮಿ ಮಹೇಶ್ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

blank

ಖಾಸಗಿ ಶಾಲೆಗಳಿರುವಂತೆ ಸರ್ಕಾರಿ ಸ್ಕೂಲ್‌ಗಳಲ್ಲಿ ಮೂಲ ಸೌಲಭ್ಯಗಳ ಜತೆಗೆ ವಿಷಯವಾರು ಶಿಕ್ಷಕರು, ಆಟದ ಮೈದಾನ, ಪೌಷ್ಟಿಕ ಆಹಾರ, ಶಾಲಾ ಗ್ರಂಥಾಲಯ ವ್ಯವಸ್ಥೆ ಮಾಡಿ. ಆಂಗ್ಲ ಮಾಧ್ಯಮದಲ್ಲೂ ಸ್ಪೋಕನ್ ಇಂಗ್ಲಿಷ್, ಕಂಪ್ಯೂಟರ್, ಲೈಬ್ರರಿ, ಲ್ಯಾಬ್‌ಗಳನ್ನು ಅಭಿವೃದ್ಧಿಪಡಿಸಬೇಕು. ಬಡವರು ಸಾಲ ಮಾಡಿ ಖಾಸಗಿ ಶಾಲೆಗಳಿಗೆ ಹೋಗುವುದನ್ನು ತಪ್ಪಿಸಿದಂತಾಗುತ್ತದೆ. ಕ್ಲಸ್ಟರ್ ಅಥವಾ ಹೋಬಳಿ ಮಟ್ಟದಲ್ಲಿ ಎಲ್‌ಕೆಜಿಯಿಂದ ಪಿಯುಸಿವರೆಗೆ ಉತ್ತಮ ಸೌಲಭ್ಯಗಳಿರುವ ಶಿಕ್ಷಣ ವ್ಯವಸ್ಥೆ ಕಲ್ಪಿಸಿ ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ರಷ್ಮಿ ಹೇಳಿದರು.
ಸಂಸದ ಈ.ತುಕಾರಾಮ್ ಮಾತನಾಡಿ, ತಾಲೂಕಿನ 175 ಸರ್ಕಾರಿ ಶಾಲೆಗಳ ಪೈಕಿ 93 ಶಾಲೆಗಳಿಗೆ ಇಸ್ಕಾನ್ ಊಟ ಬರುತ್ತಿಲ್ಲ. ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ ನೀಡುವ ಮೂಲಕ ಅಪೌಷ್ಟಿಕ ದೂರ ಮಾಡಬೇಕು. ಬಿಸಿಯೂಟ ಯೋಜನೆಯನ್ನು ಎಲ್ಲ ಶಾಲೆಗಳಿಗೂ ವಿಸ್ತರಿಸಬೇಕು. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ವಾಹನ ವ್ಯವಸ್ಥೆ ಮಾಡಬೇಕು ಎಂದರು.
ಶಾಸಕಿ ಅನ್ನಪೂರ್ಣ ತುಕಾರಾಮ್ ಮಾತನಾಡಿ, ವಿದ್ಯಾರ್ಥಿನಿಯರ ಋತು ಚಕ್ರದ ಸಮಯದಲ್ಲಿ ಶಾಲೆಗಳಲ್ಲಿ ಸ್ಯಾನಿಟರಿ ಪ್ಯಾಡ್‌ಗಳನ್ನು ವ್ಯವಸ್ಥೆ ಜತೆಗೆ ರೆಸ್ಟ್ ರೂಮ್ ನಿರ್ಮಿಸಬೇಕು. ಶೌಚಗೃಹ ನಿರ್ಮಿಸಿ, ನೀರಿನ ವ್ಯವಸ್ಥೆ ಮಾಡಬೇಕು ಖಾಸಗಿ ಶಾಲೆಗಳನ್ನು ಮೀರಿಸುವಂತೆ ಸರ್ಕಾರಿ ಶಾಲೆಗಳನ್ನು ನಿರ್ಮಿಸಿ ಶಿಕ್ಷಕರ ಜತೆಗೆ ಆಗತ್ಯ ಸೌಲಭ್ಯಗಳನ್ನು ಒದಗಿಸಬೇಕೆಂದರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿದರು.

ಶಿಕ್ಷಣ ಇಲಾಖೆ ಆಯುಕ್ತ ತ್ರಿಲೋಕ ಚಂದ್ರ, ಕಲಬುರಗಿ ವಿಭಾಗದ ಆಯುಕ್ತ ಆಕಾಶ್ ಶಂಕರ್, ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಡಿಡಿಪಿಐ ಉಮಾದೇವಿ, ತಹಸೀಲ್ದಾರ್ ಅನಿಲ್ ಕುಮಾರ್, ತಾಪಂ ಇಒ ಮಡಗಿನ ಬಸಪ್ಪ, ಬಿಇಒ ಡಾ.ಐ.ಆರ್.ಅಕ್ಕಿ, ಬಿಸಿಯೂಟ ಎಡಿ ಶ್ರೀಧರ ಮೂರ್ತಿ ಮುಂತಾದವರಿದ್ದರು.

Share This Article
blank

ರಾತ್ರಿ 9 ಗಂಟೆ ಮೇಲೆ ಊಟ ಮಾಡೋದ್ರಿಂದ ಅನಾನುಕೂಲಗಳೇ ಅಧಿಕ: ಊಟಕ್ಕೆ ಸರಿಯಾದ ಸಮಯ ಯಾವುದು? | Eating

Eating: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಡವಾಗಿ ಭೋಜನ ಮಾಡುತ್ತಿದ್ದಾರೆ, ಆದರೆ ವೈದ್ಯಕೀಯ ತಜ್ಞರು ಇದು…

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ದೇಸಿ ಸೂಪರ್‌ಫುಡ್‌ ತಿನ್ನಿ | Immunity

Immunity: ಮಳೆಗಾಲ ಬಂತೆಂದರೆ ಸೋಂಕುಗಳು ಬರುವುದು ಸಹ ಸಹಜ. ತಂಪಾದ ಗಾಳಿಗೆ ಮನೆಗಳ ಸುತ್ತಲು ಬ್ಯಾಕ್ಟೀರಿಯಾ…

blank