More

    ದಿಗ್ಗಜ ಕಪಿಲ್ ದೇವ್ ದಾಖಲೆ ಹಿಂದಿಕ್ಕಿದ ವೇಗಿ ಜಸ್‌ಪ್ರೀತ್ ಬುಮ್ರಾ

    ಲಂಡನ್: ವೇಗಿ ಜಸ್‌ಪ್ರೀತ್ ಬುಮ್ರಾ, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 100 ವಿಕೆಟ್ ಕಬಳಿಸಿದ ಭಾರತದ ವೇಗದ ಬೌಲರ್ ಎನಿಸಿಕೊಂಡರು. 24ನೇ ಪಂದ್ಯದಲ್ಲಿ ಬುಮ್ರಾ ಈ ಸಾಧನೆ ಮಾಡುವ ಮೂಲಕ ದಿಗ್ಗಜ ಕಪಿಲ್ ದೇವ್ (25 ಪಂದ್ಯ) ಹೆಸರಿನಲ್ಲಿದ್ದ ದಾಖಲೆಯನ್ನು ಹಿಂದಿಕ್ಕಿದರು. 1980ರಲ್ಲಿ ಕಪಿಲ್ ದೇವ್ ಈ ಸಾಧನೆ ಮಾಡಿದ್ದರು. ಇರ್ಫಾನ್ ಪಠಾಣ್ (2008, 28 ಪಂದ್ಯ), ಮೊಹಮದ್ ಶಮಿ (2018, 29 ಪಂದ್ಯ) ಅತಿವೇಗವಾಗಿ 100 ವಿಕೆಟ್ ಕಬಳಿಸಿದ ಭಾರತೀಯ ವೇಗಿಗಳ ಪೈಕಿ ಕ್ರಮವಾಗಿ 3ನೇ ಹಾಗೂ 4ನೇ ಸ್ಥಾನದಲ್ಲಿದ್ದಾರೆ. ಬುಮ್ರಾ, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಭಾರತೀಯ ಬೌಲರ್‌ಗಳ ಪೈಕಿ 22ನೇ ಸ್ಥಾನದಲ್ಲಿದ್ದು, ಕನ್ನಡಿಗ ಅನಿಲ್ ಕುಂಬ್ಳೆ (619) ಅಗ್ರಸ್ಥಾನದಲ್ಲಿದ್ದಾರೆ.

    ಇದನ್ನೂ ಓದಿ: ಇಂಗ್ಲೆಂಡ್ ಎದುರು ಭಾರತಕ್ಕೆ 157 ರನ್ ಜಯ, ಸರಣಿಯಲ್ಲಿ 2-1 ರಿಂದ ಮುನ್ನಡೆ

    ವೇಗದ ಬೌಲರ್‌ಗಳ ಮಾರಕ ದಾಳಿ ನೆರವಿನಿಂದ ಪ್ರವಾಸಿ ಭಾರತ ತಂಡ 4ನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಎದುರು 157 ರನ್‌ಗಳಿಂದ ಭರ್ಜರಿ ಜಯ ದಾಖಲಿಸಿತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿದ ಭಾರತ ತಂಡ, ಪ್ರತಿಷ್ಠಿತ ಲಾರ್ಡ್ಸ್ ಹಾಗೂ ಓವಲ್ ಮೈದಾನಗಳಲ್ಲಿ ಜಯ ದಾಖಲಿಸುವ ಮೂಲಕ ಇಂಗ್ಲೆಂಡ್ ಪ್ರವಾಸದ ಇತಿಹಾಸದಲ್ಲೇ ಐತಿಹಾಸಿಕ ಸಾಧನೆ ಮಾಡಿತು. ಅಲ್ಲದೆ, 50 ವರ್ಷಗಳ ಬಳಿಕ ಓವಲ್ ಮೈದಾನದಲ್ಲಿ ಗೆಲುವಿನ ನಗೆ ಬೀರಿತು. 1971ರಲ್ಲಿ ಕಡೇ ಬಾರಿಗೆ ಈ ಮೈದಾನದಲ್ಲಿ ಭಾರತಕ್ಕೆ ಜಯ ಒಲಿದಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts