ಕೋಟ: ಸಾಕಷ್ಟು ವರ್ಷಗಳಿಂದ ತೆಕ್ಕಟ್ಟೆಯಿಂದ ಕಾರ್ಕಡದವರೆಗೆ ಕೃತಕ ನೆರೆಯಿಂದ ರೈತರ ಬೆಳೆ ಕೊಳೆತು ಹಾನಿಯಾಗಿದೆ. ಎಷ್ಟು ಬಾರಿ ಮನವಿ ನೀಡಿದರೂ ಪ್ರಯೋಜನ ಇಲ್ಲದಂತಾಗಿದೆ. ಹಲವು ಬಾರಿ ಅಧಿಕಾರಿಗಳಿಗೆ, ರಾಜಕಾರಣಿಗಳಿಗೆ ಒತ್ತಡ ಹೇರಿದ್ದೇವೆ ಆದರೆ ಪ್ರಯೋಜನವಾಗಿಲ್ಲ ಎಂದು ಕೋಟದ ರೈತ ಧ್ವನಿ ಅಧ್ಯಕ್ಷ ಜಯರಾಮ್ ಶೆಟ್ಟಿ ಮಣೂರು ಹೇಳಿದರು.
ಶ್ರೀ ಹಿರೇಮಹಾಲಿಂಗೇಶ್ವರ ದೇವಾಲಯದಲ್ಲಿ ಶನಿವಾರ ಬ್ರಹ್ಮಾವರ ತಾಲೂಕಿನ ಮಣೂರು, ಗಿಳಿಯಾರು, ಚಿತ್ರಪಾಡಿ, ಬನ್ನಾಡಿ, ಕಾರ್ಕಡ ಗ್ರಾಮದ ಕೃತಕ ನೆರೆ ಸಂತ್ರಸ್ತ ರೈತರ ಐತಿಹಾಸಿಕ ಬೃಹತ್ ಉಪವಾಸ ಸತ್ಯಾಗ್ರಹ ಹಾಗೂ ಹಕ್ಕೊತ್ತಾಯ ಕರಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆ.7ರಂದು ಬೆಳಗ್ಗೆ ಕೋಟ ಶ್ರೀ ಹಿರೇಮಹಾಲಿಂಗೇಶ್ವರ ದೇವಾಲಯ ಜಾತ್ರಾ ಮೈದಾನದಲ್ಲಿ ಸಾವಿರಾರು ರೈತರು ಸೇರಿ ಸಾಂಕೇತಿಕವಾಗಿ ಉಪವಾಸ ಸತ್ಯಾಗ್ರಹ ಮಾಡಲು ತೀರ್ಮಾನಿಸಿದ್ದೇವೆ ಎಂದರು.
ವಕೀಲ ಟಿ.ಮಂಜುನಾಥ್ ಗಿಳಿಯಾರು, ಸಾಮಾಜಿಕ ಕಾರ್ಯಕರ್ತ ನಾಗರಾಜ್ ಗಾಣಿಗ, ರೈತ ಮುಖಂಡರಾದ ಸುಭಾಸ್ ಶೆಟ್ಟಿ, ಬೋಜ ಪೂಜಾರಿ ಗಿಳಿಯಾರು, ಹಂಡಿಕೆರೆ ರಾಘವೇಂದ್ರ ಶೆಟ್ಟಿ, ಸಿದ್ದ ದೇವಾಡಿಗ ಹರ್ತಟ್ಟು, ಚಂದ್ರ ಹಾಡಿಕೆರೆ, ತಿಮ್ಮ ಕಾಂಚನ್ ಹರ್ತಟ್ಟು, ನಿತ್ಯಾನಂದ ಶೆಟ್ಟಿ ಹರ್ತಟ್ಟು, ರಮೇಶ್ ಮೆಂಡನ್ ಸಾಲಿಗ್ರಾಮ, ಮಹಾಬಲ ಪೂಜಾರಿ ಹರ್ತಟ್ಟು, ಮಹೇಶ್ ಶೆಟ್ಟಿ ದ್ಯಾವಸ, ಗಿರೀಶ್ ದೇವಾಡಿಗ ಹರ್ತಟ್ಟು, ಗಿರೀಶ್ ನಾಯಕ್ ಕೋಟ, ಭಾಸ್ಕರ್ ಶೆಟ್ಟಿ ಮಣೂರು ಪಡುಕರೆ, ಸುರೇಶ್ ಪೂಜಾರಿ ಗಿಳಿಯಾರು, ಮಹೇಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಕೀರ್ತಿಶ್ ಪೂಜಾರಿ ಕೋಟ ವಂದಿಸಿದರು.