ಹಾವೇರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: 6 ಜನರು ಸ್ಥಳದಲ್ಲೇ ಸಾವು..Haveri

ಹಾವೇರಿ: ( Haveri ) ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಜನರು ಸಾವನ್ನಪ್ಪಿದ್ದಾರೆ.

ಹರಿಹರ ನಿವಾಸಿ ಫರಾನ್ (27), ರಾಣೆಬೆನ್ನೂರು ನಿವಾಸಿ ಎಮ್ಮಿಶಿಪಾ (16), ಗೋವಾದ ಪಣಜಿ ನಿವಾಸಿಗಳಾದ ಅಲಿಷಾ (20), ಪುಲಖಾನ್ (17) ಮೃತರು. ತಷ್ಕಿನ್ ರಾಣೆಬೆನ್ನೂರು, ಪಿರೋಜ್ ಗಾಯಗೊಂಡವರು. ಮೃತರು ರಾಣೆಬೇನ್ನೂರು ನಗರದ ಬೇಕರಿ ವ್ಯಾಪಾರಿ ಅಶೋಕ್​ ಎಂಬುವವರ ಸಂಬಂಧಿಕರ ಮಕ್ಕಳು.

ಶಾಲೆ ರಜೆ ಇರುವ ಹಿನ್ನಲೆ ಸಂಬಂಧಿಕರೆಲ್ಲಾ ಸೇರಿ ರಾಣೇಬೆನ್ನೂರಿನಿಂದ ಗೋವಾಕ್ಕೆ ಹೊರಟಿದ್ದರು. ಇಂದು ಅಗಡಿ ತೋಟಕ್ಕೆ ಹೋಗಿ ನಂತರ ಗೋವಾಕ್ಕೆ ಹೋಗುವ ಪ್ಲಾನ್​ನಲ್ಲಿದ್ದರು  ಎಂದು ಹೇಳಲಾಗುತ್ತಿದೆ.

ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

TAGGED:
Share This Article

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…

ಕಂಕುಳಲ್ಲಿರುವ ಕಪ್ಪು ಕಲೆ ಕಡಿಮೆಯಾಗಲು ಏನು ಮಾಡಬೇಕು? underarms

underarms: ಅನೇಕ ಹುಡುಗಿಯರು ಕಂಕುಳಲ್ಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು  ಅನೇಕ ಪ್ರಯತ್ನ ಮಾಡುತ್ತಾರೆ. ಇದಕ್ಕಾಗಿ ಅವರು…

ಪ್ರತಿದಿನ ಒಂದು ಕಪ್ ಅರಿಶಿನ ಶುಂಠಿ ಚಹಾ ಕುಡಿದು ಈ ಎಲ್ಲಾ ಸಮಸ್ಯೆಗಳಿಗೆ ಗುಡ್​​ ಬಾಯ್​​ ಹೇಳಿ | Immunity

Immunity: ನಿಮ್ಮ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗಿದ್ದರೆ, ಅಡುಗೆಮನೆಯಲ್ಲಿರುವ ಅರಿಶಿನ ಮತ್ತು ಶುಂಠಿ ಪದಾರ್ಥಗಳು ಅದನ್ನು…