ಕೌಟುಂಬಿಕ ಕಲಹ; ಕುಡಿದ ಮತ್ತಿನಲ್ಲಿ ಮಗಳನ್ನು ಹೊಡೆದು ಕೊಂದ ತಂದೆ

Crime
Published on

ಗುವಾಹಟಿ: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ತಂದೆಯೇ ಮಗಳನ್ನು ಹತ್ಯೆ ಮಾಡಿರುವ ಘಟನೆ ಅಸ್ಸಾಂನ ಚರೈಡಿಯೋ ಜಿಲ್ಲೆಯಲ್ಲಿ ನಡೆದಿದೆ.

ಘಟನೆ ಸಂಬಂಧ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ.

ಕೌಟುಂಬಿಕ ಕಲಹ

ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯುವರಾಜ್​ ಇದು ಕೌಟುಂಬಿಕ ಹಿನ್ನಲೆಯಲ್ಲಿ ಹತ್ಯೆ ನಡೆದಿರಬಹುದು. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ತನಿಖೆ ಪೂರ್ಣ ಆಗುವವರೆಗೂ ನಾವು ಯಾವುದೇ ರೀತಿಯ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

assault

ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಆರೋಪಿ ತಂದೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ದೊಣ್ಣೆಯಿಂದ ಹಲ್ಲೆ

ಬುಧವಾರ ತಡರಾತ್ರಿ ಟಿಮೊನ್​ ಟೀ ಗಾರ್ಡನ್​ನಲ್ಲಿ ಘಟನೆ ನಡೆದಿದ್ದು ಸ್ಥಳೀಯರ ಪ್ರಕಾರ ಬಾಲಕಿಯ ಮೇಲೆ ಹಲವಾರು ಬಾರಿ ದೊಣ್ಣೆಯಿಂದ ಹಲ್ಲೆ ನಡೆಸಲಾಗಿತ್ತು.

ಆ ನಮೆಯಲ್ಲಿ ಜಗಳ ನಡೆಯುತ್ತಿರುವುದು ಇದೇ ಮೊದಲಲ್ಲ ಇದಕ್ಕೂ ಮುನ್ನ ಬಂಧಿತ ಆರೋಪಿ ಕುಡಿದು ಬಂದು ಹೆಂಡತಿ ಹಾಗೂ ಮಗಳ ಮೇಲೆ ಹಲ್ಲೆ ನಡೆಸುತ್ತಿದ್ದ. ಸಹಾಯಕ್ಕಾಗಿ ಆತನ ಪತ್ನಿ ಕೂಗಾಡಿದಳು ಮತ್ತು ನಾವು ಅಲ್ಲಿಗೆ ತೆರಳಿ ಬಾಲಕಿಯನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದೆವು ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net