More

    ರಾಜ್ಯ ವಿಧಾನಸಭೆ ಚುನಾವಣೆ; ಗೆದ್ದು ಬೀಗಿದ ತಂದೆ-ಮಕ್ಕಳು ಯಾರ್‍ಯಾರು ಗೊತ್ತಾ?

    ಬೆಂಗಳೂರು: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ.

    ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಹೆಚ್ಚು ಸದ್ದು ಮಾಡಿದೆ. ಈ ಚುನಾವಣೆಯಲ್ಲಿ ಪ್ರಮುಖವಾಗಿ ತಂದೆ ಹಾಗೂ ಮಕ್ಕಳು ಸ್ಪರ್ಧಿಸಿ ಗೆಲ್ಲುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.

    ಬೆಂಗಳೂರಿನಲ್ಲಿ ಗೆದ್ದ ಪ್ರಮುಖರು

    ರಾಜ್ಯ ರಾಜಧಾನಿ ಬೆಂಗಳೂರಿನ ಹೈವೋಲ್ಟೇಜ್​ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಪಕ್ಷದಿಂದ ಸ್ಪರ್ಧಿಸಿ ನಾಲ್ವರು ವಿಧಾನಸಭೆಗೆ ಆಯ್ಕೆಯಾಗಿದ್ದು ಇವರೆಲ್ಲರೂ ತಂದೆ ಮಕ್ಕಳು ಎನ್ನುವುದು ವಿಶೇಷ.

    ಬಿಟಿಎಂ ಲೇಔಟ್​ ಹಾಗೂ ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ ಬಿಜೆಪಿ ಅಭ್ಯರ್ಥಿ ಶ್ರೀಧರ್​ ರೆಡ್ಡಿ ವಿರುದ್ಧ 9,222 ಸಾವಿರ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.

    Father daughter

    ಎರಡನೇ ಬಾರಿಗೆ ವಿಧಾನಸಭೆಗೆ ಸ್ಪರ್ಧಿಸಿದ್ದ ಸೌಮ್ಯ ರೆಡ್ಡಿ ಬಿಜೆಪಿಯ ಸಿ.ಕೆ. ರಾಮಮೂರ್ತಿ ವಿರುದ್ಧ 150 ಮತಗಳ ಅಂತರದಲ್ಲಿ ಪ್ರಯಾಸಕರ ಗೆಲುವು ಸಾಧಿಸಿದ್ದಾರೆ. ಈ ಇಬ್ಬರು ನಾಯಕರು ತಂದೆ ಮಗಳು ಎನ್ನುವುದು ವಿಶೇಷ.

    ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆ; ಕಷ್ಟದ ದಿನಗಳನ್ನು ನೆನೆದು ಡಿಕೆಶಿ ಭಾವುಕ

    ತಂದೆ-ಮಗನಿಗೆ ವಿಜಯದ ಮಾಲೆ

    ಇನ್ನು ವಿಜಯನಗರ ಹಾಗೂ ಗೊವಿಂದರಾಜನಗರದಲ್ಲಿ ಎಂ. ಕೃಷ್ಣಪ್ಪ ಹಾಗೂ ಪ್ರಿಯಾಕೃಷ್ಣ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಗೆಲುವು ಸಾಧಿಸಿರುವುದು ವಿಶೇಷವಾಗಿದೆ.

    ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಎಂ.ಕೃಷ್ಣಪ್ಪ ಬಿಜೆಪಿ ಅಭ್ಯರ್ಥಿ ಹೆಚ್​. ರವೀಂದ್ರ ವಿರುದ್ಧ 8,900 ಅಂತರದಲ್ಲಿ ಜಯದ ನಗೆ ಬೀರಿದ್ದಾರೆ.

    Father son

    ಗೋವಿಂದರಾಜನಗರದಲ್ಲಿ ಕಾಂಗ್ರೆಸ್​ ಪಕ್ಷದಿಂದ ಸ್ಪರ್ಧಿಸಿದ್ದ ಪ್ರಿಯಾಕೃಷ್ಣ ಬಿಜೆಪಿ ಪಕ್ಷದ ಹುರಿಯಾಳು ಮಾಜಿ ಕಾರ್ಪೋರೇಟರ್​ ಉಮೇಶ್​ ಶೆಟ್ಟಿ ವಿರುದ್ಧ 12,516 ಸಾವಿರ ಮತಗಳ ಅಂತರದಲ್ಲಿ ಜಯ ಗಳಿಸಿದ್ದಾರೆ.

    ಜೆಡಿಎಸ್​ ಮರ್ಯಾದೆ ಕಾಪಾಡಿದ ತಂದೆ-ಮಗ

    ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್​ ಪಕ್ಷಕ್ಕೆ ಈ ಚುನಾವಣೆ ಪ್ರಾಬಲ್ಯ ಹಾಗೂ ಅಸ್ತಿತ್ವದ ಪ್ರಶ್ನೆಯಾಗಿತ್ತು. ಕ್ರಮವಾಗಿ ಜೆಡಿಎಸ್​ನಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್​ನತ್ತ ಮುಖ ಮಾಡಿದ್ದ ಜಿ.ಟಿ. ದೇವೇಗೌಡ ಹಾಗೂ ಅವರ ಪುತ್ರ ಹರೀಶ್​ಗೌಡರನ್ನು ಉಳಿಸಿಕೊಳ್ಳುವಲ್ಲಿ ದೊಡ್ಡಗೌಡರು ಯಶಸ್ವಿಯಾಗಿದ್ದರು.

    ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಿ.ಟಿ. ದೇವೇಗೌಡ ಕಾಂಗ್ರೆಸ್​ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ವಿರುದ್ಧ 25,500 ಸಾವಿರ ಮತಗಳ ಅಂತರದಲ್ಲಿ ಗೆಲುವಿನ ನಗೆ ಬೀರಿದ್ದಾರೆ.

    GTD

    ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆಟಿಡಿ ಪುತ್ರ ಹರೀಶ್​ ಗೌಡ ಕಾಂಗ್ರೆಸ್​ ಅಭ್ಯರ್ಥಿ ಹೆಚ್​.ಪಿ. ಮಂಜುನಾಥ್​ ವಿರುದ್ಧ 2,412 ಸಾವಿರ ಮತಗಳ ಅಂತದರಲ್ಲಿ ಗೆಲ್ಲುವ ಮೂಲಕ ಜಿಲ್ಲೆಯಲ್ಲಿ ಜೆಡಿಎಸ್​ ಪಕ್ಷದ ಮಾನ ಮರ್ಯಾದೆಯನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಜೆಡಿಎಸ್​-ಕಾಂಗ್ರೆಸ್​ನಿಂದ ಗೆದ್ದು ಬೀಗಿದ ಅಪ್ಪ-ಮಗ

    ಅರಕಲಗೂಡು ವಿಧಾನಸಭಾ ಕ್ಷೇತದಲ್ಲಿ ಜೆಡಿಎಸ್​ನಿಂದ ಸ್ಪರ್ಧಿಸಿ ಮಾಜಿ ಸಚಿವ ಎ. ಮಂಜು ಕಾಂಗ್ರೆಸ್​ ಹಾಗೂ ಬಿಜೆಪಿ ಅಭ್ಯರ್ಥಿಗಳ ವಿರುದ್ಧ 19,605 ಸಾವಿರ ಮತಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿದ್ದಾರೆ.

    2021ರಲ್ಲಿ ಮಡಿಕೇರಿ ಕ್ಷೇತ್ರಕ್ಕೆ ನಡೆದ ವಿಧಾನಪರಿಷತ್​ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಎ.ಮಂಜು ಪುತ್ರ ಮಂಥರ್​ ಗೌಡ ಬಿಜೆಪಿಯ ಅಪ್ಪಚ್ಚು ರಂಜನ್​​ಗೆ ವಿರುದ್ಧ 4,402 ಸಾವಿರ ಮತಗಳ ಅಂತರದಲ್ಲಿ ಜಯದ ನಗೆ ಬೀರಿದ್ದಾರೆ.

    ರಾಜ್ಯ ವಿಧಾನಸಭೆ ಚುನಾವಣೆ; ಗೆದ್ದು ಬೀಗಿದ ತಂದೆ-ಮಕ್ಕಳು ಯಾರ್‍ಯಾರು ಗೊತ್ತಾ?

    ಈ ಇಬ್ಬರು ಬೇರೆ ಬೇರೆ ಪಕ್ಷಗಳಿಂದ ಸ್ಪರ್ಧಿಸಿ ಜಯ ಸಾಧಿಸಿರುವುದು ರಾಜ್ಯ ರಾಜಕಾರಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ.

    ಗೆದ್ದು ಬೀಗಿದ ತಂದೆ-ಮಗ

    ದಾವಣಗೆರೆ ಉತ್ತರ ಹಾಗೂ ದಕ್ಷಿಣದಲ್ಲಿ ಎಸ್.ಎಸ್ ಮಲ್ಲಿಕಾರ್ಜುನ್ ಹಾಗೂ ಅವರ ತಂದೆ ಶಾಮನೂರು ಶಿವಶಂಕರಪ್ಪನವರು ಗೆದ್ದು ಗೆಲುವಿನ ನಗೆಯನ್ನು ಬೀರಿದ್ದಾರೆ.

    ದಾವಣಗೆರೆ ಉತ್ತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಎಸ್‌.ಮಲ್ಲಿಕಾರ್ಜುನ್‌ 78,345 ಮತಗಳನ್ನು ಪಡೆಯುವ ಗೆಲುವು ಸಾಧಿಸಿದ್ದರೆ, ಮತ್ತೊಂದೆಡೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ 83,839 ಅವರು ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯ ಗಳಿಸಿದ್ದಾರೆ.

    Shamanur Shivashankarappa

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts