ಅಪ್ಪ-ಅಮ್ಮ ಸ್ಥಳದಲ್ಲೇ ಸಾವು; ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರು!

Accident (13)
Published on

ಚಿಕ್ಕಬಳ್ಳಾಪುರ: ಎರಡು ದ್ವಿಚಕ್ರ ವಾಹನಗಳಿಗೆ ಟೆಂಪೋ ಒಂದು ಡಿಕ್ಕಿ ಹೊಡೆದಿದ್ದು, ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಎರಡು ದ್ವಿಚಕ್ರ ವಾಹನಗಳಿಗೆ ಟೆಂಪೋ ಡಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಟೆಂಪೋಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ.

ಕುರುಬೂರು ಗ್ರಾಮದ ಶ್ರೀರಾಮ್ (35) ಹಾಗೂ ಅವರ ಪತ್ನಿ ಶ್ಯಾಮಲಾ (30) ಸಾವಿಗೀಡಾದವರು. ಇವರು ಮೂವರು ಮಕ್ಕಳೊಂದಿಗೆ ಪ್ರತ್ಯೇಕ ದ್ವಿಚಕ್ರವಾಹನದಲ್ಲಿ ಸಾಗುತ್ತಿದ್ದರು. ಟೆಂಪೋ ಎರಡೂ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಳಿಕ ಈ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಟೆಂಪೋ ಉರಿಯಲಾರಂಭಿಸಿದ್ದು, ಚಾಲಕ ಪರಾರಿಯಾಗಿದ್ದಾನೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net