More

    ಪಕ್ಷ ಬೇರೆಯಾದ್ರೂ ಗೆದ್ದ ಅಪ್ಪ-ಮಗ ಜೋಡಿ!

    ಬೆಂಗಳೂರು: ಇಲ್ಲೊಂದು ಅಪ್ಪ ಮಗನ ಜೋಡಿ, ಬೇರೆ ಬೇರೆ ಪಕ್ಷದಿಂದ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ ವಿಶೇಷ ಕ್ಷಣಕ್ಕೆ ಕರ್ನಾಟಕ ಚುನಾವಣೆ ಸಾಕ್ಷಿ ಆಗಿದೆ. ಈ ಜೋಡಿ ಇನ್ಯಾರದ್ದೂ ಅಲ್ಲ, ಜೆಡಿಎಸ್ ಅಭ್ಯರ್ಥಿ ಎ ಮಂಜು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ.

    ತಂದೆ ಎ ಮಂಜು, ಅರಕಲಗೂಡಿನಲ್ಲಿ ಜೆಡಿಎಸ್ ಪಕ್ಷದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದರೆ, ಮಗ ಮಂಥರ್ ಗೌಡ, ಕೊಡಗು ಜಿಲ್ಲೆಯಿಂದ ಸ್ಪರ್ಧಿಸಿದ್ದರು. ಕೊಡಗು ಜಿಲ್ಲೆಯಲ್ಲಿ 19ನೇ ಸುತ್ತಿನ ಮತ ಎಣಿಕೆ ನಡೆದಿದ್ದು ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ, 82,774 ಮತಗಳನ್ನು ಗಳಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಷುರಂಜನ್ 77,811 ಮತಗಳನ್ನು ಗಳಿಸಿದ್ದು 4,963ಮತಗಳ ಅಂತರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

    ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್‌ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.

    2018ರ ಫಲಿತಾಂಶ ಏನಿತ್ತು?

    2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್ 80 ಮತ್ತು ಜೆಡಿಎಸ್ 31 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 11 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts