ಬೆಂಗಳೂರು: ಬಾವ ಬಾಮೈದುನ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ವೆಂಕಟೇಶ್(೪೮) ಕೊಲೆಯಾದವರು. ರಾಮು ಕೊಲೆಗೈದ ಆರೋಪಿ.
ವೆಂಕಟೇಶ್ ಮತ್ತು ರಾಮು ಇಬ್ಬರು ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ರೋಲ್ಡ್ ಗೋಲ್ಡ್ ಸರ ಮಾರಾಟ ಮಾಡುತ್ತಿದ್ದರು. ಭಾನುವಾರ ಮಧ್ಯರಾತ್ರಿ ಮದ್ಯದ ಅಮಲಿನಲ್ಲಿ ಬಾವ ರಾಮು ಮತ್ತು ಬಾಮೈದ ವೆಂಕಟೇಶ್ ಮೆಜೆಸ್ಟಿಕ್‌ನ ಎಸ್‌ಬಿಸಿಯ ಪಾರ್ಕಿಂಗ್ ಸ್ಥಳದಲ್ಲಿ ಯಾವುದೋ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಆಕ್ರೋಶಗೊಂಡ ರಾಮು, ವೆಂಕಟೇಶ್‌ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರಾಮುವಿಗೆ ಪಾರ್ಕಿಂಗ್ ಸ್ಥಳದಲ್ಲಿ ಇದ್ದ ಆಂಬ್ಯುಲೆನ್ಸ್‌ನ ಚಾಲಕ ಪ್ರಥಮ ಚಿಕಿತ್ಸೆ ನೀಡಿ ಹೋಗಿದ್ದಾರೆ. ಕೆಲ ಸಮಯದ ಬಳಿಕ ವೆಂಕಟೇಶ್ ಮೃತಪಟ್ಟಿದ್ದಾರೆ. ತಡರಾತ್ರಿ ಮತ್ತೊಬ್ಬ ಸಂಬಂಧಿ ಆಭರಣಗಳನ್ನು ಬೇರೆ ಮಾರಾಟ ಮಾಡೋಣ ಎಂದು ಹೇಳಲು ಹೋದಾಗ ವೆಂಕಟೇಶ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಲ್ಲದೇ ಪರಾರಿಯಾಗಿರುವ ಆರೋಪಿಯ ಪತ್ತೆಗೆ ತಂಡವನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.