ಮಗನನ್ನೇ ಗುಂಡಿಕ್ಕಿ ಕೊಂದ ತಂದೆ

ಬೆಳಗಾವಿ: ಬೆಂಗಳೂರಿನ ಎಂಇಜಿ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧನನ್ನು ಆತನ ತಂದೆಯೇ ಗುಂಡಿಕ್ಕಿ ಕೊಂದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ನಯಾನಗರದಲ್ಲಿ ನಡೆದಿದೆ.

ಯೋಧ ಈರಣ್ಣ ವಿಠ್ಠಲ ಇಂಡಿ (21) ಮೃತ ದುರ್ದೈವಿ. ಈರಣ್ಣ ರಜೆಗೆಂದು ತನ್ನ ಊರಿಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಯೋಧನ ತಂದೆ ತನ್ನ ಮಗ, ಮಡದಿ ಮತ್ತು ಮಗಳ ಮೇಲೆ ಗುಂಡು ಹಾರಿಸಿದ್ದಾರೆ. ಈ ಸಂದರ್ಭದಲ್ಲಿ ಎದೆ ಮತ್ತು ಹೊಟ್ಟೆಗೆ ಗುಂಡು ತಗುಲಿದ ಈರಣ್ಣ ಸ್ಥಳದಲ್ಲೇ ಮೃತಟ್ಟರೆ, ಗುಂಡೇಟು ತಗುಲಿ ಗಾಯಗೊಂಡಿರುವ ಯೋಧನ ತಾಯಿ ಮತ್ತು ತಂಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಣಕಾಸಿನ ವಿಚಾರವಾಗಿ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಯೋಧನ ತಂದೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಪೋಸ್ಟ್ ಮಾಸ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಘಟನೆ ಬಳಕಿ ಯೋಧನ ತಂದೆ ಪರಾರಿಯಾಗಿದ್ದಾರೆ.

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *