ಸಾಕಲು ಕಷ್ಟವಾಗುತ್ತಿದೆ ಎಂದು ಮಗನನ್ನು ಕೆರೆಗೆ ಎಸೆದು ಕೊಂದ ಕ್ರೂರಿ

ಮೈಸೂರು: ಸಾಕಲು ಕಷ್ಟವಾಗುತ್ತಿದೆ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತನ್ನ ಒಂದೂವರೆ ವರ್ಷದ ಮಗನನ್ನು ಕೆರೆಗೆ ಎಸೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಮಾಕೋಡಿನಲ್ಲಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ಆರೋಪಿ ಗಣೇಶ್​ (30) ಎಂಬಾತನನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಆರೋಪಿ ಗಣೇಶ್​ಗೆ 2014ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಲಕ್ಷ್ಮೀ ಎಂಬುವವರ ಜತೆ ಮದುವೆಯಾಗಿತ್ತು. ದೇವನಹಳ್ಳಿಯಲ್ಲಿ ವಾಸವಿದ್ದ ದಂಪತಿಗೆ ಈಗಾಗಲೇ ಇಬ್ಬರು ಹೆಣ್ಣುಮಕ್ಕಳಿದ್ದು, ಕಳೆದ ವರ್ಷ … Continue reading ಸಾಕಲು ಕಷ್ಟವಾಗುತ್ತಿದೆ ಎಂದು ಮಗನನ್ನು ಕೆರೆಗೆ ಎಸೆದು ಕೊಂದ ಕ್ರೂರಿ