More

    13ರ ಮಗಳಿಗೆ ಅಶ್ಲೀಲ ದೃಶ್ಯ ತೋರಿಸಿ ಕಿರುಕುಳ ನೀಡಿದ ತಂದೆ..

    ಪಾಲಿ: ತನ್ನ ಅಪ್ರಾಪ್ತ ವಯಸ್ಸಿನ ಮಗಳಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಕಿರುಕುಳ ನೀಡುತ್ತಿದ್ದ ತಂದೆಯನ್ನು ಬಂಧಿಸಿರುವ ಘಟನೆ ರಾಜಸ್ಥಾನದ ಪಾಲಿಯಲ್ಲಿ ನಡೆದಿದೆ.

    ಘಟನೆಗೆ ಸಂಬಂಧಿಸಿದಂತೆ ಆರೋಪಿಯ ಪತ್ನಿ ಪೊಲೀಸರಿಗೆ ದೂರು ನೀಡಿದ್ದು, ಆಕೆಯ 42 ವರ್ಷದ ಪತಿಯನ್ನು ಬಂಧಿಸಲಾಗಿದೆ. ಮಾಹಿತಿಯ ಪ್ರಕಾರ, ಆರೋಪಿ ತಂದೆ ತನ್ನ 13 ವರ್ಷದ ಮಗಳಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸಿ ಕಿರುಕುಳ ನೀಡುತ್ತಿದ್ದನು.

    ಇದನ್ನೂ ಓದಿ: ನೀವು ಮೂತ್ರವನ್ನು ಹಿಡಿದಿಟ್ಟುಕೊಳ್ಳುತ್ತೀರಾ..? ಈ ಸಮಸ್ಯೆಗಳ ಬಗ್ಗೆ ಎಚ್ಚರ..!

    ಈ ಘಟನೆಯು ಕೆಲ ದಿನಗಳ ಹಿಂದೆ ನಡೆದಿದ್ದು, ಹೆಂಡತಿ ಮನೆಯಲ್ಲಿ ಇರದ ವೇಳೆ ಗಂಡನು ಬಾಲಕಿಗೆ ವಿಡಿಯೋಗಳನ್ನು ತೋರಿಸಿ ಕಿರುಕುಳ ನೀಡಿದ್ದಾನೆ. ಮನೆಗೆ ಹಿಂದಿರುಗಿದ ಬಳಿಕ ಮಗಳು ಘಟನೆಯ ಬಗ್ಗೆ ತಿಳಿಸಿದ್ದು, ಆ ಬಳಿಕ ಸುಮ್ಮನಿರುವಂತೆ ಇಬ್ಬರಿಗೂ ಆರೋಪಿಯು ಬೆದರಿಕೆ ಹಾಕಲು ಪ್ರಾರಂಭಿಸಿದ್ದಾನೆ.

    ಕೊನೆಗೆ ಆರೋಪಿ ವಿರುದ್ಧ ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ಅಪ್ರಾಪ್ತ ಬಾಲಕಿಯ ಹೇಳಿಕೆಯನ್ನೂ ದಾಖಲಿಸಿಕೊಂಡ ಪೊಲೀಸರು ಪೋಕ್ಸ್‌ ಕಾಯ್ದೆಯಡಿ ಪ್ರಕರಣದಡಿ ಆರೋಪಿಯನ್ನು ಬಂಧಿಸಿದ್ದಾರೆ.(ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts