Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಕೃಷಿ ಹೊಂಡದಲ್ಲಿ ಇಂಜಿನಿಯರ್ ತಂದೆ, ಮಗ; ಕೆರೆಯಲ್ಲಿ ಬಾಲಕರಿಬ್ಬರು ಸಾವು

Thursday, 14.06.2018, 5:00 PM       No Comments

ನೆಲಮಂಗಲ: ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಮಗ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ನೆಲಮಂಗಲ ತಾಲೂಕಿನ ಎಲೇಕ್ಯಾತನಹಳ್ಳಿಯಲ್ಲಿ ಘಟನೆ ನಡೆದಿದ್ದು, ತಂದೆ ರಾಜಣ್ಣ (55) ಮಗ ಅಮಿತ್(15) ಮೃತ ದುರ್ದೈವಿಗಳು. ದುಬೈನಲ್ಲಿ ಇಂಜಿನಿಯರ್ ಆಗಿದ್ದ ರಾಜಣ್ಣ ರಜೆಯ ನಿಮಿತ್ತ ಊರಿಗೆ ಬಂದಿದ್ದರು. ತಮ್ಮ ಜಮೀನಿನ ಕೃಷಿ ಹೊಂಡದಲ್ಲಿ ಈಜಾಡಲು ಹೋಗಿ ಮೃತಪಟ್ಟಿದ್ದಾರೆ.

ದಾಬಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹಗಳಿಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ನಡೆಸಿದ್ದಾರೆ.

ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವು
ತುಮಕೂರು: ಶಿರಾ ತಾಲೂಕಿನ ಹಳೆಬಿಜ್ಜನಬೆಳ್ಳ ಗ್ರಾಮದ ಕೆರೆಯಲ್ಲಿ ಕೆರೆಯಲ್ಲಿ ಈಜಲು‌ ತೆರಳಿದ್ದ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಬಿಜ್ಜನಬೆಳ್ಳ ಗ್ರಾಮದ ಸಚಿನ್(13), ಹರೀಶ್(13) ಮೃತರು. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top