22.8 C
Bengaluru
Saturday, January 18, 2020

ಬೆಂಗಳೂರಲ್ಲಿ ಬೌನ್ಸ್ ಬೈಕ್​ಗಳ ದುರ್ಬಳಕೆ ಆಗುವ ಭೀತಿ!

Latest News

PHOTOS| ಉಡುಪಿಯಲ್ಲಿ ವೈಭವದ ಅದಮಾರು ಪರ್ಯಾಯ ಮೆರವಣಿಗೆ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಮೆರವಣಿಗೆಗೆ ಕಲಾತಂಡಗಳು ಹೆಚ್ಚಿನ ಮೆರಗು ನೀಡಿತು. ಶನಿವಾರ ಮುಂಜಾನೆ 2.30ಕ್ಕೆ...

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಬೆಂಗಳೂರು: ಸಾರ್ವಜನಿಕರ ಉಪಯೋಗಕ್ಕಿರುವ ಬೌನ್ಸ್ ಬೈಕ್ ಸೇವೆ ಅಡ್ಡದಾರಿ ಹಿಡಿಯುತ್ತಿದೆ. ಅಪರಾಧ ಕೃತ್ಯಗಳಿಗೆ ಬಳಕೆಯಾಗುವುದರ ಜತೆಗೆ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿರುವುದು ಆರ್​ಟಿಒ ಹಾಗೂ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

ಕೆ.ಆರ್.ಪುರ ಹಾಗೂ ರಾಮಮೂರ್ತಿನಗರದಲ್ಲಿ ಬೌನ್ಸ್ ಬೈಕ್​ನಲ್ಲಿ ಬಂದ ದುಷ್ಕರ್ವಿುಗಳು, ಇಬ್ಬರು ಮಹಿಳೆಯರ ಮೇಲೆ ವಿಕೆಟ್​ಗಳಿಂದ ಹಲ್ಲೆ ನಡೆಸಿ ಸರಗಳವು ಮಾಡಿರುವ ಪ್ರಕರಣ ಗುರುವಾರ ವರದಿಯಾಗಿದೆ. ಮತ್ತೊಂದೆಡೆ ಮಲ್ಲೇಶ್ವರದಲ್ಲಿ ಬಾಲಕರು ತ್ರಿಬ್ಬಲ್ ರೈಡಿಂಗ್ ಮಾಡಿ ಆರ್​ಟಿಒ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ಬಾಲಕರನ್ನು ವಿಚಾರಣೆ ನಡೆಸಿದಾಗ ಸ್ನೇಹಿತನ ಡಿಎಲ್ ಮೂಲಕ ಆನ್​ಲೈನ್​ನಲ್ಲಿ ಬೌನ್ಸ್ ಬೈಕ್ ಬುಕ್ ಮಾಡಿದ್ದಾಗಿ ಹೇಳಿದ್ದಾರೆ. ಪಾಲಕರು, ಸ್ನೇಹಿತ ಅಥವಾ ಬೈಕ್ ಸಂಸ್ಥೆ ಯಾರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂಬ ಗೊಂದಲ ಸೃಷ್ಟಿಯಾಗಿತ್ತು. ಕೊನೆಗೆ ಸಂಸ್ಥೆ ವಿರುದ್ಧವೇ ಕೇಸ್ ಮಾಡುವಂತೆ ಆರ್​ಟಿಒ ಶಿಫಾರಸು ಮಾಡಿದೆ.

ನೋ ರ್ಪಾಂಗ್ ಜಾಗದಲ್ಲಿ ನಿಲುಗಡೆ, ಪಾನಮತ್ತರಾಗಿ ವಾಹನ ಚಾಲನೆ, ಸಿಗ್ನಲ್ ಜಂಪ್, ಅತಿವೇಗ, ಚಾಲನೆ ವೇಳೆ ಮೊಬೈಲ್ ಬಳಕೆ ಹೀಗೆ ಹಲವು ಟ್ರಾಫಿಕ್ ನಿಯಮಗಳ ಉಲ್ಲಂಘನೆ ಪ್ರಕರಣಗಳೂ ದಿನೇದಿನೆ ಹೆಚ್ಚಾಗುತ್ತಿವೆ. ಯಾರ ಮೇಲೆ ಕೇಸ್ ದಾಖಲಿಸಬೇಕೆಂಬುದು ಗೊತ್ತಾಗದೆ ಬೈಕ್ ಜಪ್ತಿ ಮಾಡಿದರೂ ಅದನ್ನು ಕೊಂಡೊಯ್ಯಲು ತಿಂಗಳುಗಟ್ಟಲೇ ಯಾರೂ ಬರುವುದಿಲ್ಲ. ಬೈಕ್​ಗಳನ್ನು ಕಾಯಬೇಕಾದ ಪರಿಸ್ಥಿತಿ ನಮ್ಮದು ಎನ್ನುತ್ತಾರೆ ಪೊಲೀಸ್ ಅಧಿಕಾರಿಗಳು.

ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕೊಂಡೊಯ್ಯುವ, ಎಲ್ಲೆಂದರಲ್ಲಿ ಬೈಕ್ ನಿಲ್ಲಿಸುವ ಅವಕಾಶ ಕಲ್ಪಿಸಲಾಗಿದೆ. ಇದನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೆಲವರು ಬೈಕ್​ಗಳ ಬಿಡಿಭಾಗಗಳು, ಹೆಲ್ಮೆಟ್​ಗಳನ್ನೇ ಕಳವು ಮಾಡುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ವಾಹನಕ್ಕೆ ಹಾನಿಯುಂಟು ಮಾಡಲಾಗುತ್ತಿದೆ.

ಡಿಎಲ್ ಟೆಸ್ಟ್​ಗೂ ಬೌನ್ಸ್ ಬೈಕ್: ವಿಶೇಷ ವೆಂದರೆ ಇತ್ತೀಚೆಗೆ ಯುವಕನೊಬ್ಬ ಯಶವಂತಪುರದ ಆರ್​ಟಿಒ ಕಚೇರಿಗೆ ವಾಹನ ಚಾಲನಾ ಪರವಾನಗಿ ಪಡೆಯಲು ಬೌನ್ಸ್ ಬೈಕನ್ನೇ ತೆಗೆದುಕೊಂಡು ಹೋಗಿದ್ದ. ಅಧಿಕಾರಿಗಳು ಪ್ರಶ್ನಿಸಿದಾಗ ನನ್ನ ಬೈಕ್ ಬೇರೊಬ್ಬ ಕೊಂಡೊಯ್ದಿದ್ದಾನೆ. ಹೀಗಾಗಿ ಬೌನ್ಸ್ ಬೈಕ್ ತಂದಿದ್ದೇನೆ. ಟೆಸ್ಟ್​ಗೆ ಯಾವ ಬೈಕ್ ಆದರೇನು ನೀವು ಪರೀಕ್ಷೆ ನಡೆಸಿ ಎಂದು ಆತ ದಬಾಯಿಸಿದ್ದ. ಈತನ ಸಮಜಾಯಿಷಿಗೆ ಏನು ಮಾಡಬೇಕೆಂದು ತಿಳಿಯದೆ ಆರ್​ಟಿಒ ಅಧಿಕಾರಿ ಚಾಲನಾ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟಿದ್ದಾರೆ.

ಸಾರ್ವಜನಿಕ ಉಪಯೋಗಕ್ಕಾಗಿ ಜಾರಿಗೆ ತಂದಿರುವ ಬೌನ್ಸ್ ಬೈಕ್ ಅನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆ ಜತೆ ರ್ಚಚಿಸಿ ಇನ್ನಷ್ಟು ಭದ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ.

| ವಿನಯ್ ರೊಟ್ಟಿ ಮುಖ್ಯಸ್ಥ, ಬೌನ್ಸ್ ಕಾಪೋರೇಟ್ ಅಭಿವೃದ್ಧಿ ಮತ್ತು ಹಣಕಾಸು ವಿಭಾಗ

ಬೌನ್ಸ್ ಬೈಕ್ ಚಲಾಯಿಸುತ್ತಿದ್ದ ಮೂವರು ಬಾಲಕರನ್ನು ಹಿಡಿದು ಪಾಲಕರಿಗೆ ನೋಟಿಸ್ ಕಳಿಸಿ ಕಚೇರಿಗೆ ಕರೆಸಿ ವಿಚಾರಣೆ ನಡೆಸಲಾಯಿತು. ಅಪ್ರಾಪ್ತರಿಗೆ ವಾಹನ ಚಾಲನೆಗೆ ಕೊಟ್ಟರೆ ಪಾಲಕರ ವಿರುದ್ಧ ಕೇಸ್ ದಾಖಲಿಸಬೇಕು. ಆದರಿಲ್ಲಿ ಬೈಕ್ ಬೌನ್ಸ್ ಸಂಸ್ಥೆಗೆ ಸೇರಿರುವುದರಿಂದ ಕಂಪನಿ ವಿರುದ್ಧ ದೂರು ದಾಖಲಿಸಲು ಪೊಲೀಸರಿಗೆ ಸೂಚಿಸಲಾಗಿದೆ.

| ರಾಜಣ್ಣ ಆರ್​ಟಿಒ ಇನ್​ಸ್ಪೆಕ್ಟರ್

ಕೀರ್ತಿನಾರಾಯಣ ಸಿ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...