ಶಾಲೆ ಕಾಮಗಾರಿಯಿಂದ ಗುಡ್ಡ ಕುಸಿತದ ಭೀತಿ

Gururaj
Published on

ಕುಂದಾಪುರ: ಬೈಂದೂರು ವ್ಯಾಪ್ತಿಯ ಶಂಕರನಾರಾಯಣ ಸೌಡ ಎಂಬಲ್ಲಿ ನಿರ್ಮಿಸಲಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲಾ ಕಟ್ಟಡ ಕಾಮಗಾರಿಯಿಂದ ಗುಡ್ಡ ಕುಸಿತದ ಭೀತಿ ಎದುರಾಗಿದ್ದು, ಭವಿಷ್ಯದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಖಾತ್ರಿಪಡಿಸಿಕೊಳ್ಳುವಲ್ಲಿ ಸರ್ಕಾರ ತ್ವರಿತ ಕ್ರಮಕೈಗೊಳ್ಳಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಒತ್ತಾಯಿಸಿದರು.

ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಉತ್ತರಿಸಿ, ಈ ವಿಚಾರ ಸರ್ಕಾರದ ಗಮನದಲ್ಲಿ ಇದೆ. ಶಾಲಾ ಕಟ್ಟಡಗಳ ಸಮೀಪ ಕಟ್ಟಡ ಕಾಮಗಾರಿಯಿಂದ ಗುಡ್ಡ ಕುಸಿಯುವುದನ್ನು ತಡೆಗಟ್ಟಲು ಅನುಮೋದಿತ ವಿನ್ಯಾಸದಂತೆ ಕಾಂಕ್ರೀಟ್ ತಡೆಗೋಡೆಗಳನ್ನು ನಿರ್ಮಿಸಲಾಗಿರುತ್ತದೆ. ಕಾಮಗಾರಿಯ ಗುಣಮಟ್ಟದ ನಿರ್ವಹಣೆ ಬಗ್ಗೆ ಖಾತ್ರಿಗೆ ಅಧೀಕ್ಷಕ ಅಭಿಯಂತ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಹಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಅಂದಾಜು ಪಟ್ಟಿ ಹಾಗೂ ವಿನ್ಯಾಸದಂತೆ ಕಾಮಗಾರಿ ನಿರ್ವಹಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಕಾಮಗಾರಿ ಗುಣಮಟ್ಟ ಕಾಯದ್ದುಕೊಳ್ಳಲು ಕ್ರಮವಹಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈಗಾಗಲೇ ಅನುಮೋದಿತ ವಿನ್ಯಾಸದಂತೆ ತಡೆಗೋಡೆ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net