Feb. 10 ರಿಂದ ಗ್ರಾಮ ಆಡಳಿತ ಅಧಿಕಾರಿಗಳ 2ನೇ ಹಂತದ ಅನಿಧಿರ್ಷ್ಟಾವಧಿ ಮುಷ್ಕರ

blank

ಗದಗ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂದ ವತಿಯಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ Feb. 10ರಿಂದ 2ನೇ ಹಂತದ ಅನಿಧಿರ್ಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಟಕದ ಉಪಾಧ್ಯ ಚಂದ್ರಶೇಖರ ನಾಯಕ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, 2024ರ ಸೆ. 26ರಿಂದ ಅ. 3ರ ವರೆಗೆ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಗ್ರಾಮ ಆಡಳಿತ ಅಧಿಕಾರಿಗಳ ಅನಿಧಿರ್ಷ್ಟಾವಧಿ ಮುಷ್ಕರದ ಸಂದರ್ಭದಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದಶಿರ್ಗಳು ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರಿಂದ ಮುಷ್ಕರ ಹಿಂಪಡೆಯಲಾಗಿತ್ತು. ಆದರೆ, ಈವರೆಗೂ ಭರವಸೆ ಈಡೇರಿಸದ ಕಾರಣ 2ನೇ ಹಂತದ ಅನಿಧಿರ್ಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಗ್ರಾಮ ಆಡಳಿತ ಅಧಿಕಾರಿಗಳ ಪ್ರಮುಖ ಬೇಡಿಕೆಗಳಾದ ರಾಜ್ಯಾದ್ಯಂತ ಆಧಾರ ಸೀಡಿಂಗ್​ ಪ್ರಕ್ರಿಯೆಯಲ್ಲಿ ಪತ್ತೆಯಾಗಿರುವ 51.5 ಲ ಮೃತ ಖಾತೆದಾರರ ಪಹಣಿ ದಾಖಲೆ ಅಭಿಯಾನ ಮಾದರಿಯಲ್ಲಿ ವಾರಸುದಾರರ ಹೆಸರುಗಳಿಗೆ ಪೌತಿ ಖಾತೆ ದಾಖಲಿಸುವಂತೆ ಇ&ಪೌತಿ ಖಾತಾ ಆಂದೋಲನ ಕೈಬಿಡಬೇಕು. ಚಿಕ್ಕಮಗಳೂರು ಜಿಲ್ಲೆಯಲ್ಲಿ 30 ಗ್ರಾಮ ಆಡಳಿತ ಅಧಿಕಾರಿಗಳ ವಾಷಿರ್ಕ ವೇತನ ಬಡ್ತಿಯನ್ನು ತಡೆದು ನೈಸಗಿರ್ಕ ನ್ಯಾಯ ತತ್ವಗಳನ್ನು ಹಾಗೂ ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಹೊರಡಿಸಿರುವ ದಂಡನಾ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಅಂತರ್​ ಜಿಲ್ಲಾ ವರ್ಗಾವಣೆ ಮರುಸ್ಥಾಪಿಸುವ ಬಗ್ಗೆ ವಿಶೇಷ ಮಾರ್ಗಸೂಚಿ ರಚಿಸಬೇಕು ಎಂಬ ವಿವಿಧ ಬೇಡಿಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟಣೆ ತಿಳಿಸಿದೆ.

 

TAGGED:
Share This Article

ಹೋಳಿ ಆಡಿದ ನಂತರ ನಿಮ್ಮ ಚರ್ಮ ಒಣಗಿದೆಯೇ? ಈ ಮನೆಮದ್ದುಗಳು ನಿಮಗಾಗಿ.. Holi Skin Care

ಬೆಂಗಳೂರು: ( Holi Skin Care ) ಹೋಳಿ ಹಬ್ಬವು ಸಂತೋಷದಿಂದ ತುಂಬಿರುತ್ತದೆ. ಈ ದಿನ…

ನಿದ್ರೆ ಕಡಿಮೆಯಾದ್ರೆ ಈ ಎಲ್ಲಾ ಸಮಸ್ಯೆಗಳು ಕಾಡುತ್ತವೆ ! Sleep

Sleep: ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಾಕಷ್ಟು ನಿದ್ರೆ ಎಷ್ಟು ಮುಖ್ಯ ಎಂದು ನಿಮಗೆ…

ಅತಿಯಾಗಿ ತಿನ್ನುವುದರಿಂದ ಬೊಜ್ಜು ಹೆಚ್ಚಾಗುವುದಿಲ್ಲ; ಈ ಕಾರಣಗಳೇ ಅದಕ್ಕೆ ಮೂಲ ಕಾರಣ | Health Tips

ಬೊಜ್ಜು ವೇಗವಾಗಿ ಬೆಳೆಯುತ್ತಿರುವ ಸಮಸ್ಯೆಯಾಗಿದ್ದು ಇದು ಅನೇಕ ಅಪಾಯಕಾರಿ ಕಾಯಿಲೆಗಳಿಗೆ ಕಾರಣವಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ…