More

    ಫೆ.1, 2ರಂದು ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ, ಜೆ.ಎಂ.ನಾಗಯ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ

    ಬಳ್ಳಾರಿ: ನಗರದಲ್ಲಿ ಫೆ.1 ಹಾಗೂ 2ರಂದು ಆಯೋಜಿಸಲಾಗಿರುವ 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಂಶೋಧಕ ಜೆ.ಎಂ.ನಾಗಯ್ಯ ಆಯ್ಕೆಯಾಗಿದ್ದಾರೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸಿದ್ದರಾಮ ಕಲ್ಮಠ ತಿಳಿಸಿದ್ದಾರೆ.

    ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣದವರಾದ ಜೆ.ಎಂ.ನಾಗಯ್ಯ ಹಂಪಾಪಟ್ಟಣದಲ್ಲಿ ಪ್ರಾಥಮಿಕ ಹಾಗೂ ಮರಿಯಮ್ಮನಹಳ್ಳಿಯಲ್ಲಿ ಪ್ರೌಢಶಿಕ್ಷಣ ಪಡೆದಿದ್ದಾರೆ. ಕರ್ನಾಟಕ ವಿವಿಯಿಂದ ಬಿಎ, ಎಂಎ ಕನ್ನಡ, ಶಿಲಾಶಾಸನ, ಅನುವಾದ ವಿಷಯದಲ್ಲಿ ಡಿಪ್ಲೊಮಾ ಹಾಗೂ ಬಿಎಲ್‌ಐಎಸ್‌ಸಿ ಪದವಿ ಪೂರೈಸಿದ್ದಾರೆ. 1885ರಲ್ಲಿ ಗುಲ್ಬರ್ಗಾ ವಿವಿಯಲ್ಲಿ ಸಹಾಯಕ ಗ್ರಂಥಪಾಲಕರಾಗಿ ನೇಮಕಗೊಂಡು ಬಳ್ಳಾರಿ ಜಿಲ್ಲೆಯ ನಂದಿಹಳ್ಳಿ ಹಾಗೂ ಬಳ್ಳಾರಿ ಸ್ನಾತಕೋತ್ತರ ಕೇಂದ್ರಗಳಲ್ಲೂ ಕಾರ್ಯನಿರ್ವಹಿಸಿದ್ದಾರೆ.

    1987ರಲ್ಲಿ 6ನೇ ವಿಕ್ರಮಾದಿತ್ಯನ ಶಾಸನಗಳು ಒಂದು ಅಧ್ಯಯನ ಎಂಬ ವಿಷಯದಲ್ಲಿ ಡಾ.ಎಂ.ಎಂ.ಕಲಬುರ್ಗಿ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಸಂಶೋಧನೆ ಕೈಗೊಂಡಿದ್ದಾರೆ. ಹಳಗನ್ನಡ, ಶಾಸ್ತ್ರ ಸಾಹಿತ್ಯ, ಶಾಸನ, ಗ್ರಂಥ ಸಂಪಾದನೆ, ಇತಿಹಾಸ, ಸಂಸ್ಕೃತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಂಶೋಧನೆ ಮಾಡಿದ್ದಾರೆ. 19 ಸಂಶೋಧನಾ ಕೃತಿಗಳನ್ನು ರಚಿಸಿದ್ದು, ಬಳ್ಳಾರಿ ಜಿಲ್ಲೆಯ ಸಾಂಸ್ಕೃತಿಕ ಇತಿಹಾಸ, 6ನೇ ವಿಕ್ರಮಾದಿತ್ಯನ ಶಾಸನಗಳು ಒಂದು ಅಧ್ಯಯನ, ಬಳ್ಳಾರಿ ಜಿಲ್ಲೆಯ ಶಾಸನಗಳು, ಕರ್ನಾಟಕ ಶಿಲ್ಪಗಳಲ್ಲಿ ಶಿವಶರಣರು, ಡಾ.ಫ.ಗು.ಹಳಕಟ್ಟಿ ಸಮಗ್ರ ಸಾಹಿತ್ಯ ಸಂಪುಟ, ಸಮಗ್ರ ಸಂಶೋಧಕ ಎಂ.ಎಂ.ಕಲಬುರ್ಗಿ, ಕಲ್ಯಾಣ ಚಾಲುಕ್ಯರ ಶಾಸನಗಳು ಪ್ರಮುಖವಾಗಿವೆ.

    ಕರ್ನಾಟಕ ವಿವಿಯ ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ, ವಿದ್ಯಾರ್ಥಿ ಕಲ್ಯಾಣ ವಿಭಾಗದ ನಿರ್ದೇಶಕ, ಅಕಾಡೆಮಿಕ್ ಕೌನ್ಸಿಲ್ ಪದನಿಮಿತ್ತ ಸದಸ್ಯರಾಗಿದ್ದರು. ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ, ವಿವಿಧ ವಿಶ್ವವಿದ್ಯಾಲಯಗಳ ಪರೀಕ್ಷಾ ಮಂಡಳಿಯ ಅಧ್ಯಕ್ಷರಾಗಿದ್ದರು. ಆತ್ಮಬಲಿದಾನ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts