ಜಮಖಂಡಿ: ಪ್ರಸಕ್ತ ಸಾಲಿನ ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕಿನ ಹಿಂಗಾರು ಹಂಗಾಮು ಬೆಳೆ ಸಮೀಕ್ಷೆ ಕಾರ್ಯ ಫೆ.15 ರಂದು ಕೊನೆಗೊಳ್ಳಲಿದೆ. ಕಳೆದ ವರ್ಷದಂತೆ ಈ ವರ್ಷವೂ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಬೆಳೆದ ಬೆಳೆಗಳ ವಿವರವನ್ನು ದಾಖಲಿಸಲು ಹಾಗೂ ಖಾಸಗಿ ವ್ಯಕ್ತಿಗಳ ಮೂಲಕವು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.
ಈಗಾಗಲೇ ಬೆಳೆ ಸಮೀಕ್ಷೆ ನಮೂದಿಸಿದವರು ಬೆಳೆ ವಿವರಗಳನ್ನು ಬೆಳೆ ದರ್ಶಕ ಆ್ಯಪ್‌ನಲ್ಲಿ ಪರೀಕ್ಷಿಸಿಕೊಳ್ಳಬೇಕು. ಬೆಳೆಗಳ ವಿವರ ಬಿಟ್ಟು ಹೋದಲ್ಲಿ ಅಥವಾ ಕ್ಷೇತ್ರದ ವಿವರ ತಪ್ಪಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಲು ಫೆ.15 ಕೊನೆಯ ದಿನವಾಗಿದೆ.
ತಾಲೂಕಿನ ರೈತ ಬಾಂಧವರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ತಾಂತ್ರಿಕ ಸಹಾಯಕ್ಕಾಗಿ ಹತ್ತಿರದ ಗ್ರಾಮ ಆಡಳಿತಾಧಿಕಾರಿಗಳ ಕಚೇರಿ ಅಥವಾ ರೈತ ಸಂಪರ್ಕ ಕೆಂದ್ರ ಸಂಪರ್ಕಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕ ಸಿದ್ದಪ್ಪ ಪಟ್ಟಿಹಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.