More

    ಸೇಂಟ್ ಆನ್ಸ್ ಕಾಲೇಜಿನ ಯಶಿಕಾಗೆ ಸನ್ಮಾನ

    ವಿರಾಜಪೇಟೆ: ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಪಟ್ಟಣದ ಸೇಂಟ್ ಆನ್ಸ್ ಪದವಿ ಕಾಲೇಜಿನ ಅಂತಿಮ ಬಿ.ಎಸ್ಸಿ ವಿದ್ಯಾರ್ಥಿನಿ ಯಶಿಕಾ ಅವರನ್ನು ವಿದ್ಯಾಸಂಸ್ಥೆಯ ವತಿಯಿಂದ ಬುಧವಾರ ಸನ್ಮಾನಿಸಲಾಯಿತು. ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಾಕರ್ ವಿದ್ಯಾರ್ಥಿನಿಯನ್ನು ಸನ್ಮಾನಿಸಿದರು. ಯಶಿಕಾ ಇತ್ತೀಚಿಗೆ ಜಮ್ಮುವಿನಲ್ಲಿ ನಡೆದ ರಾಷ್ಟ್ರಮಟ್ಟದ ನೃತ್ಯ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಂಡು ಪ್ರಥಮ ಬಹುಮಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಸನ್ಮಾನ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ, ಉಪನ್ಯಾಸಕಿಯರಾದ ಹೇಮಾ, ನಿಶಾ, ಪ್ರತಿಮಾ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts