ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

blank

ಯಾದಗಿರಿ: ಸರ್ಕಾರಿ ವಸತಿ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರಿಗೆ ಕೂಡಲೇ ಲಾಕ್ಡೌನ್ ಅವಧಿಯ ಸಂಪೂರ್ಣ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದಿಂದ ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಜೂನ್ ತಿಂಗಳಿನಿಂದ ಎಲ್ಲ ಹೊರಗುತ್ತಿಗೆ ಕಾರ್ಮಿಕರ ಮೂಲಕ ಹಾಸ್ಟೆಲ್ಗಳಲ್ಲಿ ಸ್ಯಾನಿಟೈಜೇಷನ್ ಕೆಲಸಕ್ಕೆ, ಇನ್ನಿತರ ಪೂರ್ವ ಸಿದ್ಧತಾ ಕೆಲಸಗಳನ್ನು ಆರಂಭಿಸಿ ಎಂದಿನಂತೆ ವೇತನ ನೀಡಬೇಕು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಬಾಕಿ ಇರುವ ಹಲವು ತಿಂಗಳ ವೇತನವನ್ನು ಈ ಕೂಡಲೇ ಪಾವತಿಸಬೇಕು. ಕ್ವಾರಂಟೈನ್ ಕೇಂದ್ರಗಳಾಗಿ ಪರಿವತರ್ಿತ ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಲಾಖೆಯ ಹೊರಗುತ್ತಿಗೆ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡಬೇಕು ಎಂದು ಪದಾಧಿಕಾರಿಗಳು ಆಗ್ರಹಿಸಿದರು.

ಹೊರಗುತ್ತಿಗೆ ಕಾರ್ಮಿಕರು ಮತ್ತು ಅವರ ಕುಟುಂಬದವರು ಕರೊನಾ ಸೋಂಕಿನಿಂದ ಬಳಲಿದರೆ ಅದರ ಚಿಕಿತ್ಸೆಯನ್ನು ಉಚಿತವಾಗಿ ನೀಡಬೇಕು ಮತ್ತು ಆಶಾ,ಅಂಗನವಾಡಿ ಕಾರ್ಯಕತರ್ೆಯರಿಗೆ ನೀಡಿರುವ ವಿಶೇಷ ಜೀವವಿಮೆ ಸೌಲಭ್ಯವನ್ನು ಇವರಿಗೂ ವಿಸ್ತರಿಸಬೇಕು, ನೇರ ನೇಮಕಾತಿಯಿಂದ ತೊಂದರೆಗೊಳಗಾದ ಗುತ್ತಿಗೆ ಕಾಮರ್ಿಕರನ್ನು ಸೇವಾ ಹಿರಿತನಕ್ಕನುಗುಣವಾಗಿ ಇತರೆ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾಧ್ಯಕ್ಷೆ ಡಿ.ಉಮಾದೇವಿ, ಬಿ.ಎನ್. ರಾಮಲಿಂಗಪ್ಪ, ಶರಣಪ್ಪ ಯಡ್ಡಳ್ಳಿ, ಸಿದ್ದಪ್ಪ, ಗಜಾನನ, ಭೀಮಶಂಕರ, ಶ್ರೀಕಾಂತ, ಭಾಗಪ್ಪ, ಹಣಮಂತ, ಮರಳಮ್ಮ, ಶ್ರೀದೇವಿ, ಲಕ್ಷ್ಮೀ, ಪದ್ಮಾ, ನಾಗಮ್ಮ, ಅಂಬಮ್ಮ, ಮಾಳಮ್ಮ, ಸೇರಿದಂತೆ ಇತರರಿದ್ದರು.

Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…