

ಬೈಂದೂರು: ವಿದ್ಯಾರ್ಥಿಗಳ ಸಾಧನೆ ಹಾಗೂ ಕಾಲೇಜಿನ ಶಿಸ್ತು ಇತರ ವಿದ್ಯಾರ್ಥಿಗಳಿಗೆ ಮಾದರಿ. ಮೂಕಾಂಬಿಕಾ ಪದವಿ ಪೂರ್ವ ಕಾಲೇಜು ಈ ಜಿಲ್ಲೆಯ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದು ಎಂದು ಕುಂದಾಪುರ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಉಪ ಪ್ರಾಂಶುಪಾಲ ಡಾ.ಚೇತನ್ ಶೆಟ್ಟಿ ಕೊವಾಡಿ ಹೇಳಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 51 ವಿದ್ಯಾರ್ಥಿಗಳನ್ನು ಶಾಲಾ ಸಭಾಭವನದಲ್ಲಿ ಗೌರವಿಸಿ ಮಾತನಾಡಿದರು. ಪ್ರಾಂಶುಪಾಲ ಗೋಪಾಲಕೃಷ್ಣ ಜಿ.ಕೆ. ಅಧ್ಯಕ್ಷತೆ ವಹಿಸಿದ್ದರು. ಹಳೇ ವಿದ್ಯಾರ್ಥಿ ಸಿಎ ಸುದೀಪ್ ಶೆಟ್ಟಿ ಕೊಡಮಾಡಿದ ಬೆಳ್ಳಿಯ ಕಾಯಿನ್ ಅನ್ನು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಎಲ್ಲ ವಿದ್ಯಾರ್ಥಿಗಳಿಗೆ ಉಡುಗೊರೆಯಾಗಿ ನೀಡಲಾಯಿತು. ಉಪನ್ಯಾಸಕರಾದ ಪೂರ್ಣಿಮಾ ಎನ್.ಜೋಯಿಸ್ ಸ್ವಾಗತಿಸಿದರು. ಎಂ.ವಾಸುದೇವ ಉಡುಪ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ರಾಮ ನಾಯಕ್ ಕೆ.ಬಿ.ವಂದಿಸಿದರು. ಜ್ಯೋತಿ ಬಿ. ಶೆಟ್ಟಿ ನಿರೂಪಿಸಿದರು.