ಬಿಜೆಪಿಯಿಂದ ಸೇಡಿನ ರಾಜಕಾರಣ: ಐವನ್ ಡಿಸೋಜ ಆರೋಪ : ಬೆಳ್ತಂಗಡಿಯಲ್ಲಿ ಅಭಿನಂದನಾ ಸಮಾರಂಭ

abhinandane
ಅಭಿನಂದನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿದರು. ರಕ್ಷಿತ್ ಶಿವರಾಂ, ಶೇಖರ ಕುಕ್ಕೇಡಿ ಮೊದಲಾದವರಿದ್ದರು.
Published on

ಬೆಳ್ತಂಗಡಿ: ದೇಶದಲ್ಲಿ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ. ರಾಜ್ಯಪಾಲರು ಬಿಜೆಪಿ ಏಜೆಂಟ್ ಆಗಿ ವರ್ತಿಸಿದರೆ ಕಾರ್ಯಕರ್ತರು ಯಾವ ತ್ಯಾಗಕ್ಕೂ ಸಿದ್ಧರಾಗಿರಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.

ಬೆಳ್ತಂಗಡಿಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾನುವಾರ ಜರುಗಿದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅಧ್ಯಕ್ಷತೆ ವಹಿಸಿ ಮಾತನಾಡಿ, ದುಡಿಯುವ ವರ್ಗ, ಶ್ರಮಿಕ ವರ್ಗದೊಂದಿಗೆ ಗಟ್ಟಿಯಾಗಿ ನಿಂತವರು ಐವನ್ ಡಿಸೋಜ ಎಂದರು.

ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಶೇಖರ ಕುಕ್ಕೇಡಿ, ರಾಷ್ಟ್ರೀಯ ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜ, ಜಿಪಂ ಮಾಜಿ ಸದಸ್ಯರಾದ ಧರಣೇಂದ್ರ ಕುಮಾರ್, ನಮಿತಾ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಜನ್ ಜಿ.ಗೌಡ, ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾಯದರ್ಶಿ ಪ್ರವೀಣ್ ಫರ್ನಾಂಡಿಸ್, ಜಿಲ್ಲಾ ಪಂಚಾಯಿತಿ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಜಿಲ್ಲಾ ಕಾರ್ಮಿಕ ಘಟಕದ ಅಬ್ದುಲ್ ರಹಿಮಾನ್ ಪಡ್ಪು, ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯ ಅಬ್ದುಲ್ ಕರೀಂ ಗೇರುಕಟ್ಟೆ, ಕಾಂಗ್ರೆಸ್ ತಾಲೂಕು ಎಸ್.ಸಿ ಘಟಕದ ಅಧ್ಯಕ್ಷ ಓಬಯ್ಯ, ಮಹಿಳಾ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜೈಸನ್ ಪಟ್ಟೇರಿ, ಸೇವಾದಳದ ಕೆ.ಸಿ.ಪ್ರದೀಪ್, ಮುಖಂಡರಾದ ಲೋಕೇಶ್ವರಿ ವಿನಯಚಂದ್ರ, ಪ್ರಶಾಂತ್ ವೇಗಸ್, ಎನ್.ಎಸ್.ಯು.ಐ ತಾಲೂಕು ಅಧ್ಯಕ್ಷ ದೀವಿತ್ ದೇವಾಡಿಗ ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಸ್ವಾಗತಿಸಿದರು. ನಗರ ಘಟಕದ ಅಧ್ಯಕ್ಷ ಸತೀಶ್ ಕಾಶಿಪಟ್ಣ ವಂದಿಸಿದರು. ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net