ಶೋಷಿತರ ದಬ್ಬಾಳಿಕೆ ತಡೆದ ನಾರಾಯಣಗುರು : ಎಂಎಲ್‌ಸಿ ಕಿಶೋರ್ ಕುಮಾರ್ ಸ್ಮರಣೆ

New Project (10)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಕೇರಳದಲ್ಲಿ ಹಿಂದೆ ಶೋಷಿತರ ದಬ್ಬಾಳಿಕೆ, ಮತಾಂತರ ನಡೆಯುತ್ತಿದ್ದು ಇದನ್ನು ತಡೆದ ನಾರಾಯಣ ಗುರುಗಳು ಕೆಳಜಾತಿಯವರಿಗೆ ಶಿವನ ಪೂಜೆ ಅವಕಾಶ ಇಲ್ಲದ ಸಮಯ ಶಿವನನ್ನು ಸ್ಥಾಪಿಸುವ ಮೂಲಕ ಜನಸಾಮಾನ್ಯರಿಗೆ ಶಿವನ ಪೂಜೆಯ ಅವಕಾಶ ಕಲ್ಪಿಸಿದರು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದರು.

ಬುಧವಾರ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ, ಯುವಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ, ನಾಲ್ಕೂರು, ತೆಂಕಕಾರಂದೂರು ಸಹಯೋಗದಲ್ಲಿ ಆಯೋಜಿಸಲಾದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರುಪೂಜೆ, ಶ್ರೀ ಸರ್ವೇಶ್ವರಿ ಪೂಜೆ, ಧಾರ್ಮಿಕ ಸಭೆ ಹಾಗೂ ರಾಜ್ಯೋತ್ಸವ ಪ್ರಶಸ್ತಿಯ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸಂಚಯನಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಅಧ್ಯಕ್ಷ ಡಾ.ತುಕಾರಾಂ ಪೂಜಾರಿ ಧಾರ್ಮಿಕ ಉಪನ್ಯಾಸ ನೀಡಿದರು.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಸತೀಶ್ ಕಾಶಿಪಟ್ನ, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅದ್ಯಕ್ಷ ರವಿ ಪೂಜಾರಿ ಚಿಲಿಂಬಿ, ಮಂಗಳೂರು ರಾ.ಹೆ. ಸಹಾಯಕ ಅಭಿಯಂತ ಗುರುಪ್ರಸಾದ್ ಎಂ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧಕ್ಷ ಜಯವಿಕ್ರಮ್ ಕಲ್ಲಾಪು ಶುಭಹಾರೈಸಿದರು.

ಸಂಘದ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಬಳಂಜ ಗ್ರಾಪಂ ಅಧ್ಯಕ್ಷೆ ಶೋಭಾ ಕುಲಾಲ್, ಸಂಘದ ಗೌರವಾಧ್ಯಕ್ಷ ಎಚ್.ದರ್ಣಪ್ಪ ಪೂಜಾರಿ, ಗೌರವ ಮಾರ್ಗದರ್ಶಕ ಕೆ.ವಸಂತ ಸಾಲಿಯಾನ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಶರತ್ ಅಂಚನ್, ಸಂಘದ ಪ್ರದಾನ ಕಾರ್ಯದರ್ಶಿ ಜಗದೀಶ್ ಬಳ್ಳಿದಡ್ಡ ಉಪಸ್ಥಿತರಿದ್ದರು.

ಸಂತೋಷ್ ಪಿ.ಕೋಟ್ಯಾನ್ ಸ್ವಾಗತಿಸಿದರು. ಚಂದ್ರಹಾಸ ಬಳಂಜ, ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.

ಸಾಧಕರಿಗೆ ಗೌರವಾರ್ಪಣೆ

ವಿಧಾನ ಪರಿಷತ್‌ಗೆ ಅಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು, ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಭರತನಾಟ್ಯದಲ್ಲಿ ಜೂನಿಯರ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ದಿಯಾ ಎಂ.ಕೋಟ್ಯಾನ್ ಅವರನ್ನು ಅಭಿನಂದಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net