

ಬೆಂಗಳೂರು: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ (Fengal Cyclone ) ಅಬ್ಬರ ಶುರುವಾಗಿದ್ದು, ಅದರ ಪ್ರಭಾವ ಕರ್ನಾಟಕದಲ್ಲೂ ಶುರುವಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂಜಾಗ್ರತ ಕ್ರಮವಾಗಿ ಜಿಲ್ಲಾಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿವೆ.
ಅದರಂತೆ ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರದಲ್ಲಿ ಮಳೆಯ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಬೆಂಗಳೂರಿನಲ್ಲಿ ಫೆಂಗಲ್ ಚಂಡಮಾರುತದ ಎಫೆಕ್ಟ್ ಜೋರಾಗಿದೆ. ಬೆಳಿಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದ್ದು, ತುಂತುರು ಮಳೆಗೆ ಸಿಟಿ ಮಂದಿ ಪರದಾಡುತ್ತಿದ್ದಾರೆ.
ಫೆಂಗಲ್ ಚಂಡಮಾರುತದಿಂದ ಜಡಿ ಮಳೆ, ವಿಪರೀತ ಚಳಿ ಹಿನ್ನೆಲೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದ್ದು, ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.