More

    ಅತಿಯಾದ ಮೆಂತ್ಯ ಸೇವನೆಯಿಂದ ಈ ಆರೋಗ್ಯ ಸಮಸ್ಯೆಗಳು ಕಾಡುತ್ತವೆ ಎಚ್ಚರ!

    ಚಳಿಗಾಲ ಬಂತೆಂದರೆ ಸಾಕು ಮೆಂತ್ಯ ಸೊಪ್ಪಿನ ಪರೋಟ ತಿನ್ನುವವರ ಸಂಖ್ಯೆಯೂ ಹೆಚ್ಚಾಗುತ್ತದೆ. ಬಿಸಿಯಾದ ಮಂತ್ಯ ಸೊಪ್ಪಿನ ಪರೋಟವನ್ನು ಎಲ್ಲರು ಇಷ್ಟಪಡುತ್ತಾರೆ. ಮೆಂತ್ಯ ಆರೋಗ್ಯಕ್ಕೆ ಒಳ್ಳೆಯದು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಇದರ ಬಳಕೆಯಿಂದ ಹಲವು ರೀತಿಯ ಕಾಯಿಲೆಗಳನ್ನು ಗುಣಪಡಿಸಬಹುದು. ಕೇವಲ ಸಕ್ಕರೆ ಮಟ್ಟವನ್ನು ಮಾತ್ರ ನಿಯಂತ್ರಿಸಿದೆ, ನಮ್ಮ ಜೀರ್ಣಕ್ರಿಯೆ ವ್ಯವಸ್ಥೆಯನ್ನು ಸಹ ಸುಧಾರಿಸುತ್ತದೆ. ಆದರೆ, ಕೆಲವೊಮ್ಮೆ ಮೆಂತ್ಯ ಕಾಳು ಅಥವಾ ಸೋಪ್ಪು ನಮ್ಮ ದೇಹಕ್ಕೆ ಹಾನಿಯನ್ನೂ ಸಹ ಉಂಟು ಮಾಡುತ್ತದೆ. ಅದು ಹೇಗೆ ಎಂಬುದನ್ನು ನಾವೀಗ ತಿಳಿಯೋಣ.

    ಮೆಂತ್ಯವನ್ನು ಅತಿಯಾಗಿ ಸೇವಿಸುವುದರಿಂದ ಹೊಟ್ಟೆಯಲ್ಲಿ ತೊಂದರೆ ಉಂಟಾಗುತ್ತದೆ. ಮೆಂತ್ಯವು ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ. ಮೆಂತ್ಯ ಕಾಳುಗಳನ್ನು ನೆನೆಸಿಟ್ಟು ಬೆಳಿಗ್ಗೆ ನೀರು ಕುಡಿಯುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು. ಆದರೆ, ಮೆಂತ್ಯವನ್ನು ನೆನೆಸಿಡುವ ಬದಲು ತಿಂದರೆ ಅದರಲ್ಲಿರುವ ಪೋಷಕಾಂಶಗಳು ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ.

    ಅಧಿಕ ರಕ್ತದೊತ್ತಡ: ಅಧಿಕ ರಕ್ತದೊತ್ತಡ ಇರುವವರಿಗೆ ಮಂತ್ಯ ತುಂಬಾ ಹಾನಿಕಾರಕವಾಗಿದೆ. ಮೆಂತ್ಯವನ್ನು ಅತಿಯಾಗಿ ಸೇವಿಸಿದರೆ, ಅದು ದೇಹದಲ್ಲಿ ಸೋಡಿಯಂ ಮಟ್ಟವನ್ನು ಕಡಿಮೆ ಮಾಡುತ್ತದೆ, ಇದು ಅಧಿಕ ಬಿಪಿಗೆ ಕಾರಣವಾಗಬಹುದು. ಹೀಗಾಗಿ ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳು ಮೆಂತ್ಯ ಬೀಜಗಳನ್ನು ಸೇವಿಸುವುದನ್ನು ತಪ್ಪಿಸಬೇಕು.

    ಉಸಿರಾಟದ ತೊಂದರೆ: ಮೆಂತ್ಯವನ್ನು ಅತಿಯಾಗಿ ಸೇವಿಸುವುದರಿಂದ ಉಸಿರಾಟದ ತೊಂದರೆಗಳು ಹೆಚ್ಚಾಗಬಹುದು. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತದ ಗುಣಲಕ್ಷಣಗಳು ಶ್ವಾಸಕೋಶಕ್ಕೆ ಹಾನಿಕಾರಕವಾಗಿದೆ. ಮೆಂತ್ಯವನ್ನು ಅತಿಯಾಗಿ ಸೇವಿಸುವುದರಿಂದ ಉಸಿರಾಟದ ತೊಂದರೆ ಉಂಟಾಗುತ್ತದೆ.

    ಗರ್ಭಾವಸ್ಥೆಯಲ್ಲಿ ಹಾನಿಕಾರಕ: ಗರ್ಭಿಣಿಯರು ಇದನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು. ಇದು ಗರ್ಭಾವಸ್ಥೆಯಲ್ಲಿ ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡಬಹುದು. ಇದು ಹೊಟ್ಟೆಗೆ ತೀವ್ರ ಪರಿಣಾಮ ಬೀರಬಹುದು. ಹೀಗಾಗಿ ಮೆಂತ್ಯ ಸೇವನೆಯನ್ನು ಆದಷ್ಟು ಕಡಿಮೆ ಮಾಡಬೇಕು.

    ಮೂತ್ರದಲ್ಲಿ ದುರ್ವಾಸನೆ: ಮೆಂತ್ಯವನ್ನು ಅತಿಯಾಗಿ ಸೇವಿಸುವುದರಿಂದ ಮೂತ್ರದಲ್ಲಿ ದುರ್ವಾಸನೆ ಬರಬಹುದು. ಮೆಂತ್ಯವನ್ನು ಸೀಮಿತ ಪ್ರಮಾಣದಲ್ಲಿ ಮಾತ್ರ ಸೇವಿಸಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

    ಮಂತ್ಯವನ್ನು ನಿಗದಿತ ಪ್ರಮಾಣದಲ್ಲಿ ಸೇವಿಸಿದರೆ ಯಾವುದೇ ತೊಂದರೆ ಇರುವುದಿಲ್ಲ. ಆದರೆ, ಅತಿಯಾಗಿ ಸೇವನೆ ಮಾಡಿದರೆ, ಅತಿಸಾರ, ಉದರ ಸಮಸ್ಯೆ, ಉಬ್ಬುವಿಕೆ, ಗ್ಯಾಸ್​, ತಲೆತಿರುಗುವಿಕೆ, ತಲೆನೋವು ಮತ್ತು ವಾಕರಿಕೆ ಸೇರಿದಂತೆ ಮುಂತಾದ ಸಮಸ್ಯೆಗಳು ತಲೆದೋರುತ್ತವೆ. ಮೆಂತ್ಯವನ್ನು ಮಕ್ಕಳಿಗೆ ಪೂರಕವಾಗಿ ಬಳಸಬಾರದು. ಗರ್ಭಾವಸ್ಥೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಳಸಿದಾಗ ಇದು ಅಸುರಕ್ಷಿತವಾಗಿದೆ.

    ಅಂದಹಾಗೆ ಇದು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ. ಈ ಮಾಹಿತಿಯು ವೈದ್ಯಕೀಯ ಸಲಹೆ ಅಥವಾ ರೋಗನಿರ್ಣಯವನ್ನು ಒಳಗೊಂಡಿಲ್ಲ. (ಏಜೆನ್ಸೀಸ್​)

    ಮುಂಬರುವ ಚಳಿಗಾಲದಲ್ಲಿ ಸಿಹಿ ಗೆಣಸು ನಿಮ್ಮ ಆಯ್ಕೆಯಾಗಿರಲಿ: ಏಕೆ ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ….

    ಪಾಕಿಸ್ತಾನದಿಂದ ಭಾರತಕ್ಕೆ ಮರಳಿದ ಅಂಜು ನಿಗೂಢವಾಗಿ ನಾಪತ್ತೆ! ಎಲ್ಲಿರಬಹುದು? ಪೊಲೀಸರು ಹೇಳಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts