More

    ರಸಗೊಬ್ಬರ ಪೂರೈಕೆಗೆ ಕ್ರಮ ಕೈಗೊಳ್ಳಿ: ಡಿಸಿ ಸೆಲ್ವಮಣಿ

    ಶಿವಮೊಗ್ಗ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಸೆಪ್ಟೆಂಬರ್ ಅಂತ್ಯದವರೆಗೆ 1,03,857 ಟನ್ ರಸಗೊಬ್ಬರ ಬೇಡಿಕೆಯಿದೆ. ರಸಗೊಬ್ಬರ ದಾಸ್ತಾನು ಅಗತ್ಯಕ್ಕೆ ತಕ್ಕಷ್ಟಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ದೊರೆಯುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧಿಕಾರಿಗಳಿಗೆ ಸೂಚಿಸಿದರು.
    ಸೋಮವಾರ ಕೃಷಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ಇದುವರೆಗೆ ವಿವಿಧ ಬಗೆಯ 64,130 ಟನ್ ರಸಗೊಬ್ಬರ ಪೂರೈಕೆಯಾಗಿದೆ. 47,910 ಟನ್ ವಿತರಣೆ ಮಾಡಲಾಗಿದೆ. 16,220 ಟನ್ ರಸಗೊಬ್ಬರ ದಾಸ್ತಾನಿದೆ. ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರ ಲಭ್ಯವಾಗುವಂತೆ ನಿಗಾ ವಹಿಸಬೇಕೆಂದರು.
    ಕೃಷಿ ಇಲಾಖೆ ಅಧಿಕಾರಿಗಳು ನಿರಂತರವಾಗಿ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರಸಗೊಬ್ಬರ ಮತ್ತು ಬಿತ್ತನೆ ಬೀಜ ದಾಸ್ತಾನು ಪರಿಶೀಲಿಸಬೇಕು. ಕಾಳಸಂತೆಯಲ್ಲಿ ಮಾರಾಟವಾಗದಂತೆ ಎಚ್ಚರಿಕೆ ವಹಿಸಬೇಕು. ಕಲಬೆರೆಕೆ ರಸಗೊಬ್ಬರ ಮಾರಾಟದ ಮೇಲೆ ನಿಗಾ ಇರಿಸಿ ನಿರಂತರ ತಪಾಸಣೆ ಕಾರ್ಯ ಕೈಗೊಳ್ಳಬೇಕು. ರಸಗೊಬ್ಬರದ ಗುಣಮಟ್ಟದ ಬಗ್ಗೆ ದೂರುಗಳು ಬಂದ ತಕ್ಷಣ ಪರಿಶೀಲನೆ ನಡೆಸಿ, ಅಂತಹ ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ತಿಳಿಸಿದರು.
    ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುವ ರಸಗೊಬ್ಬರ ದಾಸ್ತಾನು ಬಗ್ಗೆ ಕೇಂದ್ರದಲ್ಲಿ ವಿವರಗಳನ್ನು ಪ್ರಕಟಿಸಬೇಕು. ಕಳಪೆ ಬಿತ್ತನೆ ಬೀಜ ಪೂರೈಕೆ ಕುರಿತು ದೂರುಗಳು ಬಂದರೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts