More

    ಭ್ರೂಣ ಲಿಂಗ ಪತ್ತೆ ಕಾನೂನುಬಾಹಿರ

    ಅರಕಲಗೂಡು: ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಕಾನೂನುಬಾಹಿರ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಪುಷ್ಪಲತಾ ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಂಗವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಗುರುವಾರ ಆಯೋಜಿಸಿದ್ದ ಬೀದಿನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.

    ಕೆಲವು ಜಿಲ್ಲೆಗಳಲ್ಲಿ ಭ್ರೂಣ ಹತ್ಯೆ ಹೆಚ್ಚಾಗಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ. ಕೇಂದ್ರ, ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಭ್ರೂಣ ಹತ್ಯೆ ನಡೆಯುತ್ತಿದೆ. ಇದರಿಂದ ಸಮಾಜದಲ್ಲಿ ಹೆಣ್ಣು ಮತ್ತು ಗಂಡುಮಕ್ಕಳ ಅನುಪಾತದಲ್ಲಿ ಬಹಳ ವ್ಯತ್ಯಾಸವಾಗುತ್ತಿದೆ ಎಂದರು.

    ಹಾಸನ ಜಿಲ್ಲೆಯಲ್ಲಿ ಸಾವಿರ ಗಂಡು ಮಕ್ಕಳಿಗೆ 960 ಹೆಣ್ಣು ಮಕ್ಕಳಿದ್ದಾರೆ. ತಾಯಿ ಗರ್ಭದಲ್ಲೇ ಭ್ರೂಣ ಹತ್ಯೆ ಮಾಡಲಾಗುತ್ತಿದೆ. ಇದಕ್ಕಿಂತ ದೊಡ್ಡ ಪಾಪ ಮತ್ತೊಂದಿಲ್ಲ. ಹೆಣ್ಣು, ಗಂಡು ಎಂಬ ಭೇದ ಬೇಡ ಎಂದು ಹೇಳಿದರು.

    ಬಳಿಕ ಕಲಾ ತಂಡದವರು ತಾಯಿ-ಮಕ್ಕಳ ಆರೋಗ್ಯ, ಗರ್ಭಿಣಿ ಆರೋಗ್ಯ, ಸಾಂಕ್ರಾಮಿಕ ರೋಗಗಳ ಬಗ್ಗೆ, ಭ್ರೂಣ ಹತ್ಯೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

    ಹಾಗೆಯೇ ಕಲಾ ತಂಡದಿಂದ ಬೀದಿ ನಾಟಕದ ಮೂಲಕ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕೆಲ್ಲೂರು, ಸಂತೆ ಮರೂರು, ಇಬ್ಬಡಿ, ಕೋಟೆ ಕರ್ಪೂರವಳ್ಳಿ, ಕಾಳೇನಹಳ್ಳಿ, ವಡ್ಡರಹಳ್ಳಿ, ಆನಂದೂರು, ವಿ.ಜಿ.ಕೊಪ್ಪಲು, ಕಾಡನೂರು, ಎಚ್.ಕೊಂಗಳಲೆ, ಹೊಂಗನೂರು, ಹೊಸಳ್ಳಿ ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts