More

  ಭ್ರೂಣ ಹತ್ಯೆ ಮಾಡಿದವರಿಗೆ ಶಿಕ್ಷೆಯಾಗಲಿ: ಎಐಎಂಎಸ್ ಎಸ್ ಆಗ್ರಹ

  ಮೈಸೂರು: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಒಂದೆಡೆಯಾದರೆ ಮಕ್ಕಳ ಮಾರಾಟ ಜಾಲವೂ ಹೆಚ್ಚಾಗಿರುವುದು ನಾಗರಿಕ ಸಮಾಜ ಆತಂಕಗೊಳ್ಳುವಂತಾಗಿದೆ. ಆದ್ದರಿಂದ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶೀಘ್ರ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಜಿ.ಎಸ್.ಸೀಮಾ ಸರ್ಕಾರವನ್ನು ಒತ್ತಾಯಿಸಿದ್ದಾರೆ.
  ಮಂಡ್ಯ, ಮೈಸೂರು ಮತ್ತು ಬೆಂಗಳೂರಿನಲ್ಲಿ ಎರಡು ವರ್ಷಗಳಲ್ಲಿ 900 ಹೆಣ್ಣು ಭ್ರೂಣ ಹತ್ಯೆ ಮಾಡಿರುವಂತಹ ಸಮಾಜಘಾತುಕ ಕೆಲಸ ನಡೆದಿದ್ದು, ಈ ಪ್ರಕರಣದ ಹಿಂದೆ ದೊಡ್ಡ ಜಾಲವಿರುವ ಶಂಕೆ ಇದೆ. ಈ ಘಟನೆಗೆ ಸಂಬಂಧಿಸಿದಂತೆ ವೈದ್ಯರು, ನರ್ಸ್ ಸೇರಿದಂತೆ ಹತ್ತು ಜನ ಆರೋಪಿಗಳನ್ನು ಬಂಧಿಸಲಾಗಿದ್ದರೂ ಇದರ ಮೂಲವನ್ನು ಬೇರು ಸಹಿತ ತೆಗೆದು ಹಾಕಬೇಕಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
  ಮಕ್ಕಳ ಮಾರಾಟ ಜಾಲವೂ ಪತ್ತೆಯಾಗಿರುವುದು ಆತಂಕ ಉಂಟು ಮಾಡಿದೆ. ಆಡಳಿತ ವರ್ಗದ ನಿರ್ಲಕ್ಷೃ ಇಂತಹ ಘಟನೆಗಳಿಗೆ ಕಾರಣವಾಗುತ್ತಿದೆ. ಆದ್ದರಿಂದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts