20.4 C
Bengaluru
Sunday, January 19, 2020

ತ್ಯಾಜ್ಯ ಸಂಸ್ಕರಣೆಗೆ ಉತ್ತಮ ಸ್ಪಂದನೆ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ಪಿ.ಬಿ.ಹರೀಶ್ ರೈ ಮಂಗಳೂರು
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭಾರಿ ತ್ಯಾಜ್ಯ ಉತ್ಪಾದಿಸುವವರು ತಮ್ಮ ಆವರಣದಲ್ಲೇ ಹಸಿ ತ್ಯಾಜ್ಯ ಸಂಸ್ಕರಣೆ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸುವ ಆದೇಶಕ್ಕೆ ಈಗ ಸ್ಪಂದನೆ ದೊರೆಯುತ್ತಿದೆ. 25ಕ್ಕೂ ಅಧಿಕ ಅಪಾರ್ಟ್‌ಮೆಂಟ್‌ಗಳು ಹಾಗೂ ಕೆಲವು ಸಂಸ್ಥೆಗಳು ತಮ್ಮ ಆವರಣದಲ್ಲಿ ಹಸಿ ತ್ಯಾಜ್ಯ ಸಂಸ್ಕರಣೆ ವ್ಯವಸ್ಥೆ ಅಳವಡಿಸಿವೆ. ಹಸಿ ತ್ಯಾಜ್ಯವನ್ನು ಪಚ್ಚನಾಡಿಗೆ ತಂದು ಸುರಿಯುವ ಬದಲು ಈಗ ತಮ್ಮ ಆವರಣದಲ್ಲೇ ಗೊಬ್ಬರವಾಗಿ ಪರಿವರ್ತಿಸುವ ಕಾರ್ಯ ನಡೆಯುತ್ತಿದೆ.

ಭಾರಿ ತ್ಯಾಜ್ಯ ಉತ್ಪಾದಿಸುವವರು ಅಕ್ಟೋಬರ್ ಅಂತ್ಯದೊಳಗೆ ತಮ್ಮ ಆವರಣದಲ್ಲೇ ಹಸಿ ತ್ಯಾಜ್ಯ ಸಂಸ್ಕರಣೆ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಮನಪಾ ಸೂಚನೆ ನೀಡಿತ್ತು. ಆದರೆ ಬಳಿಕ ಮನಪಾ ಚುನಾವಣೆ ಘೋಷಣೆಯಾದ ಕಾರಣ ಡಿಸೆಂಬರ್ ಅಂತ್ಯದೊಳಗೆ ಅಳವಡಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಇದಕ್ಕೆ ತಪ್ಪಿದರೆ ದಂಡ ವಿಧಿಸುವುದಾಗಿ ತಿಳಿಸಿದ ಕಾರಣ ಈಗ ತ್ಯಾಜ್ಯ ಸಂಸ್ಕರಣೆಯ ವ್ಯವಸ್ಥೆ ಅಳವಡಿಕೆಗೆ ಹೆಚ್ಚಿನವರು ಮುಂದಾಗಿದ್ದಾರೆ.

ಹಸಿರು ಪೀಠದ ಆದೇಶ: ನಗರ ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ವಿಫಲವಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ರಾಷ್ಟ್ರೀಯ ಹಸಿರು ಪೀಠ, ತ್ಯಾಜ್ಯ ವಿಲೇವಾರಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಮನಪಾ ಆಡಳಿತ ಹೋಟೆಲ್ ಮಾಲೀಕರ ಸಂಘ, ಕಲ್ಯಾಣ ಮಂಟಪ, ಕ್ಯಾಟರಿಂಗ್ ಸಂಸ್ಥೆಗಳು, ಕೋಳಿ ಮಾರಾಟಗಾರರು, ಅಪಾರ್ಟ್‌ಮೆಂಟ್ ಅಸೋಸಿಯೇಶನ್, ಸಣ್ಣ ಕೈಗಾರಿಕೆಗಳ ಸಂಘ ಸಹಿತ ವಿವಿಧ ಸಂಘಗಳ ಪ್ರತಿನಿಧಿಗಳ ಸಭೆ ಕರೆದು ತ್ಯಾಜ್ಯ ಸಂಸ್ಕರಣೆ ಘಟಕ ಅಳವಡಿಕೆ ಕಡ್ಡಾಯಗೊಳಿಸಲು ತಿಳಿಸಿತ್ತು. ತ್ಯಾಜ್ಯ ಸಂಸ್ಕರಣೆ ತಂತ್ರಜ್ಞಾನ ಮತ್ತು ಸಾಧನಗಳ ಬಗ್ಗೆ ಚೆನ್ನೈ ಹಾಗೂ ಬೆಂಗಳೂರಿನ ಕೆಲವು ಸಂಸ್ಥೆಗಳು ಪ್ರಾತ್ಯಕ್ಷಿಕೆ ನೀಡಿದ್ದವು. ಇದರಲ್ಲಿ ಯಾವುದನ್ನು ಸುಲಭವಾಗಿ ಅಳವಡಿಸಿಕೊಳ್ಳಲು ಸಾಧ್ಯವಿದೆಯೋ ಅದನ್ನು ಅಳವಡಿಸುವಂತೆ ಮನಪಾ ಆಯುಕ್ತರು ಸೂಚಿಸಿದ್ದರು.

ನೋಟಿಸ್ ಜಾರಿ: ನಗರದ 1,448 ಅಪಾರ್ಟ್‌ಮೆಂಟ್ ಹಾಗೂ 387ಕ್ಕೂ ಅಧಿಕ ಆಸ್ಪತ್ರೆ, ಮಾಲ್, ಕಲ್ಯಾಣ ಮಂಟಪ ಹಾಗೂ ಇತರ ಕಟ್ಟಡಗಳಿಗೆ ಮನಪಾ ನೋಟಿಸ್ ಜಾರಿ ಮಾಡಿ ಡಿಸೆಂಬರ್ ಅಂತ್ಯದೊಳಗೆ ತ್ಯಾಜ್ಯ ಸಂಸ್ಕರಣೆ ಘಟಕ ಅಳವಡಿಸಲು ಸೂಚಿಸಿದೆ. ಈ ಪೈಕಿ ಹಲವರು ಘಟಕ ಅಳವಡಿಸಲು ಮುಂದಾಗಿದ್ದು, ಪಾಲಿಕೆಯನ್ನು ಸಂಪರ್ಕಿಸಿ ಮಾಹಿತಿ ಪಡೆಯುತ್ತಿದ್ದಾರೆ. ತ್ಯಾಜ್ಯದಿಂದ ಗೊಬ್ಬರ ತಯಾರಿ, ತ್ಯಾಜ್ಯವನ್ನು ಸುಡುವುದು ಸಹಿತ ಸಂಸ್ಕರಣೆಗೆ ಹಲವು ವಿಧಾನವಿದೆ. ಬಹುತೇಕ ಮಂದಿ ತ್ಯಾಜ್ಯದಿಂದ ಗೊಬ್ಬರ ತಯಾರಿ ಘಟಕ ನಿರ್ಮಿಸಲು ಆಸಕ್ತಿ ವಹಿಸಿದ್ದಾರೆ.

 ಎಲ್ಲ ಸಂಸ್ಥೆಗಳು ಕಡ್ಡಾಯವಾಗಿ ತ್ಯಾಜ್ಯ ಸಂಸ್ಕರಣೆ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಜನರಿಗೆ ಸಾಕಷ್ಟು ಮುಂಚಿತವಾಗಿ ಈ ಮಾಹಿತಿ ನೀಡಲಾಗಿದೆ. ಎಲ್ಲ ಅಪಾರ್ಟ್‌ಮೆಂಟ್‌ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಕೆಲವು ಅಪಾರ್ಟ್‌ಮೆಂಟ್‌ಗಳಲ್ಲಿ ಘಟಕ ನಿರ್ಮಿಸಿದ್ದಾರೆ. ಇದುವರೆಗೆ ದಂಡ ಹಾಕಿಲ್ಲ. ನಿಗದಿತ ಅವಧಿ ಬಳಿಕವೂ ತ್ಯಾಜ್ಯ ಸಂಸ್ಕರಣೆ ಘಟಕ ನಿರ್ಮಿಸದಿದ್ದರೆ ಭಾರಿ ಮೊತ್ತದ ದಂಡ ವಿಧಿಸುವುದು ಅನಿವಾರ್ಯವಾಗಲಿದೆ.
ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಆಯುಕ್ತರು, ಮನಪಾ
ತ್ಯಾಜ್ಯ ನಿರ್ವಹಣೆ ಘಟಕದ ಬಗ್ಗೆ ಅರಿವು ಮೂಡಿಸುವುದರ ಜತೆಗೆ ಪೂರಕ ಮಾಹಿತಿ ನೀಡುವ ಕಾರ್ಯದಲ್ಲಿ ತೊಡಗಿದ್ದೇವೆ. ಫಾದರ್ ಮುಲ್ಲರ್, ಅಲೋಶಿಯಸ್, ಯೇನೆಪೊಯ ಮುಂತಾದ ಸಂಸ್ಥೆಗಳು ತಮ್ಮ ಆವರಣದಲ್ಲೇ ತ್ಯಾಜ್ಯ ಸಂಸ್ಕರಣೆಗೆ ಮುಂದಾಗಿವೆ. ಅಪಾರ್ಟ್‌ಮೆಂಟ್ ಆವರಣದಲ್ಲೇ ತ್ಯಾಜ್ಯ ನಿರ್ವಹಣೆ ಘಟಕ ನಿರ್ಮಾಣಕ್ಕೆ ಜನ ಹೆಚ್ಚಿನ ಆಸಕ್ತಿ ವಹಿಸಬೇಕು.
ಜೀತ್ ಮಿಲನ್ ರೋಚ್, ಪರಿಸರ ಕಾರ್ಯಕರ್ತ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...