ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮ

blank

ಗೋಕಾಕ: ನಮ್ಮ ಅಧಿಕಾರವಧಿಯಲ್ಲಿ ನೀರಾವರಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಹಲವಾರು ಬೃಹತ್ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ ಸಂಪೂರ್ಣವಾಗಿ ನೀರಾವರಿ ಕ್ಷೇತ್ರವನ್ನಾಗಿ ಮಾಡಲಾಗಿದೆ. ಎಲ್ಲ ಗ್ರಾಮಗಳಿಗೆ ಕುಡಿಯುವ ನೀರು, ರಸ್ತೆ, ಶಾಲೆ, ಅಂಗನವಾಡಿ ಹಾಗೂ ಆರೋಗ್ಯ ಕೇಂದ್ರಗಳನ್ನು ಒದಗಿಸಿ ಜನತೆಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಿದ್ದೇನೆ ಎಂದು ತಿಳಿಸಿದರು.

ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಬೃಹತ್ ಯೋಜನೆ ಅನುಷ್ಠಾನಗೊಳಿಸುವ ಗುರಿ ಹಾಗೂ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವ ಯೋಜನೆ ಇದೆ. ನಗರದ ಸರ್ಕಾರಿ ಆಸ್ಪತ್ರೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದೆ. ರೈತರು ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ನಿಮ್ಮೆಲ್ಲರ ಆಶೀರ್ವಾದದಿಂದ ನಮಗೆ ಈ ಕಾರ್ಯ ಮಾಡಲು ಸಾಧ್ಯವಾಗುತ್ತಿದ್ದು, ನಿಮ್ಮ ಸಹಕಾರ ಸದಾ ಹೀಗೆ ನನ್ನ ಮೇಲಿರಲಿ ಎಂದು ಮನವಿ ಮಾಡಿದರು.

ವಿವಿಧ ಭೂಮಿಪೂಜೆ: ಲೋಕೋಪಯೋಗಿ ಇಲಾಖೆಯಿಂದ 10 ಕೋಟಿ ರೂ. ವೆಚ್ಚದಲ್ಲಿ ನಗರದ ಶ್ರೀಛತ್ರಪತಿ ಶಿವಾಜಿ ಮಹಾರಾಜರ ವೃತ್ತದಿಂದ ಮಹರ್ಷಿ ಶ್ರೀವಾಲ್ಮೀಕಿ ವೃತ್ತದವರೆಗೆ ರಸ್ತೆ ಕಾಮಗಾರಿ, ಅಂಕಲಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 65 ಕೋಟಿ ರೂ. ವೆಚ್ಚದಲ್ಲಿ ಮೂಲ 24/7 ಕುಡಿಯುವ ನೀರು, ಬೀದಿ ದೀಪ ಹಾಗೂ ಚರಂಡಿ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿ. ಮಲ್ಲಾಪುರ ಪಿಜಿ, ಧುಪದಾಳ (ಘಟಪ್ರಭಾ) 30 ಕೋಟಿ ರೂ. ವೆಚ್ಚದಲ್ಲಿ ಕೊಳವೆ ಮಾರ್ಗ, ಜಲ ಶುದ್ಧೀಕರಣ ಘಟಕ, 40 ಲಕ್ಷ ಲೀ.ಸಾಮರ್ಥ್ಯದ ನೆಲಮಟ್ಟದ ಜಲ ಸಂಗ್ರಹಗಾರ, ಮನೆಗಳಿಗೆ ನೀರಿನ ಸಂಪರ್ಕ ಸೇರಿ ಒಟ್ಟು 100 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು.

ಅಂಕಲಗಿಯಲ್ಲಿ ಉರ್ದು ಶಾಲೆಯ ನೂತನ ಕೊಠಡಿ ಉದ್ಘಾಟಿಸಿದರು. ಅಂಕಲಗಿ-ಕುಂದರಗಿ ಅಡವಿಸಿದ್ಧೇಶ್ವರ ಮಠದ ಡಾ.ಅಮರಸಿದ್ಧೇಶ್ವರ ಸ್ವಾಮೀಜಿ, ಯುವ ನಾಯಕ ಅಮರನಾಥ ಜಾರಕಿಹೊಳಿ, ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ತಹಸೀಲ್ದಾರ್ ಡಾ.ಮೋಹನ ಭಸ್ಮೆ, ಪೌರಾಯುಕ್ತ ರಮೇಶ ಜಾಧವ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅನಿಲಕುಮಾರ ಶಿಂಘೆ, ಡಿವೈಎಎಸ್ಪಿ ಡಿ.ಎಚ್.ಮುಲ್ಲಾ, ಪಪಂ ಮುಖ್ಯಾಧಿಕಾರಿ ಕೆಂಪಣ್ಣ ಪಾಟೀಲ, ಅಡಿವೆಪ್ಪ ನಾವಲಗಟ್ಟಿ, ವಿರೂಪಾಕ್ಷಿ ಅಂಗಡಿ, ಮುನ್ನಾ ದೇಸಾಯಿ, ಆನಂದ ಅತ್ತುಗೋಳ, ರಾಜು ತಳವಾರ, ನಗರಸಭೆ, ಪಪಂ, ಗ್ರಾಪಂ ಹಾಗೂ ಪಿಕೆಪಿಎಸ್ ಸದಸ್ಯರು ಇದ್ದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…