ಕ್ಷೇತ್ರದ ಅಭಿವೃದ್ಧಿಗೆ ಸದಾ ಸಿದ್ಧ

ನಿಪ್ಪಾಣಿ: ಅರ್ಹರಿಗೆ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಾನು ಕ್ಷೇತ್ರದ ಅಭಿವೃದ್ಧಿಗೆ ಸದಾ ಸಿದ್ಧರಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಸ್ಥಳೀಯ ವಿದ್ಯಾಮಂದಿರ ಶಾಲೆಯಲ್ಲಿ ಪಿಆರ್‌ಇಡಿ ಯೋಜನೆಯಡಿ 11 ಲಕ್ಷ ರೂ.ಅನುದಾನದಲ್ಲಿ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಪ್ರಾಮುಖ್ಯತೆ ಪಡೆದಿದೆ. ಕಾಲ ಬದಲಾಗಿದ್ದು ಬಡವರ, ರೈತರ, ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆದು ದೊಡ್ಡ ಹುದ್ದೆ ಅಲಂಕರಿಸುತ್ತಿದ್ದಾರೆ ಎಂದು ತಿಳಿಸಿದರು.

ಸುಮಾರು 75 ವರ್ಷಗಳಿಂದ ವಿದ್ಯಾದಾನ ಮಾಡುತ್ತಿರುವ ಸಂಸ್ಥೆಯ ಕಾರ್ಯ ಹೆಮ್ಮೆ ಪಡುವಂತಹದ್ದು. ಇಂತಹ ಒಳ್ಳೆಯ ಕಾರ್ಯ ಮಾಡುವ ಎಲ್ಲರಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸುವುದು ಸಚಿವೆಯಾಗಿ ನನ್ನ ಆದ್ಯ ಕರ್ತವ್ಯ ಎಂದರು.

ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಚೇರ್ಮನ್ ಚಂದ್ರಕಾಂತ ಕೋಠಿವಾಲೆ, ಅವಿನಾಶ ಮಾನವಿ, ವಿವೇಕ ಪುರಂದರೆ, ನಿತಿನ್ ವಖಾರಿಯಾ, ನಂದನ ಶೆಟ್ಟೆ, ನಿತಿನ್ ಶಹಾ, ಮುಖ್ಯ ಶಿಕ್ಷಕಿ ವಿ.ಬಿ. ಹೆಗಡೆ, ವಿ.ಆರ್.ಜನವಾಡೆ, ಪ್ರಣವ ಮಾನವಿ, ನಿಪ್ಪಾಣಿ ನಗರಸಭೆಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು. ನರೇಂದ್ರ ಶಹಾ ಸ್ವಾಗತಿಸಿದರು. ಪಿ.ಎಂ. ಪಾಟೀಲ ನಿರೂಪಿಸಿದರು. ಅಣ್ಣಾಸಾಹೇಬ ಖೋತ ವಂದಿಸಿದರು.

Share This Article

ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ಚೆಕ್​ ಮಾಡಿ ನೋಡಿ… ಇದ್ರೆ ನೀವು ರಾಜಯೋಗ ಅನುಭವಿಸುತ್ತೀರಿ!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

ನಿಮ್ಮ ಮನೆಯಲ್ಲಿ ಮರಿ ಹಲ್ಲಿ ಇದ್ರೆ ಈ ಒಂದು ತಪ್ಪು ಮಾತ್ರ ಮಾಡ್ಬೇಡಿ: ಮಾಡಿದ್ರೆ ಈ ಗಂಡಾಂತರ ಫಿಕ್ಸ್!

ಸಾಮಾನ್ಯವಾಗಿ ಹಿಂದು ಪುರಾಣದಲ್ಲಿ ಹಲ್ಲಿಗಳನ್ನು ಅದೃಷ್ಟದ ಸಂಕೇತ ಎಂದು ಕರೆಯಲಾಗಿದೆ. ಹಲ್ಲಿಗಳು ಲೊಚಗುಡುವುದು ಶುಭ ಸೂಚನೆ…

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…