More

    ಸೂಕ್ತ ಪರಿಹಾರ ನೀಡಿದಿದ್ದರೆ ಉಗ್ರ ಹೋರಾಟ

    ಹಾಸನ: ಬೇಲೂರಿನಿಂದ ಬಿಳಿಕೆರೆವರೆಗಿನ ರಾಷ್ಟ್ರೀಯ ಹೆದ್ದಾರಿ 373ಕ್ಕೆ ಭೂಮಿ ನೀಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಿದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು.

    ಪರಿಹಾರಕ್ಕಾಗಿ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಗುರುವಾರ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು.

    ಅಭಿವೃದ್ಧಿಗೆ ಅಡ್ಡಗಾಲಾಗಬಾರದು ಎಂಬ ಕಾರಣದಿಂದ ರೈತರು ಭೂಮಿ ನೀಡಿದ್ದಾರೆ. ಕೆಲ ರೈತರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಒತ್ತಾಯದಿಂದ ಭೂಮಿ ವಶಪಡಿಸಿಕೊಂಡಿದ್ದಾರೆ. ಆದರೆ ಈವರೆಗೆ ಸೂಕ್ತ ಪರಿಹಾರ ನೀಡಿಲ್ಲ. ಕೃಷಿಯನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದ ಕುಟುಂಬಗಳು ಸರ್ಕಾರದ ನಿರ್ಲಕ್ಷೃದಿಂದ ತೊಂದರೆಗೆ ಸಿಲುಕುವಂತಾಗಿದೆ ಎಂದರು.

    ಜಿಲ್ಲಾಡಳಿತ ಹಾಗೂ ಸರ್ಕಾರದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಸಮಸ್ಯೆ ಆಲಿಸಿದ ಡಿಸಿ, ಈ ಸಂಬಂಧ ಸರ್ಕಾರದ ಜತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು. ಹಸಿರು ಸೇನೆ ಜಿಲ್ಲಾಧ್ಯಕ್ಷ ಬಾಬು, ರಾಜಣ್ಣ, ತಾಲೂಕು ಅಧ್ಯಕ್ಷ ಜವರೇಶ್, ಪುಟ್ಟಸ್ವಾಮಿ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಗೌರಮ್ಮ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts