More

    ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಗುಂಪು ಘರ್ಷಣೆ; ಪರಿಸ್ಥಿತಿ ನಿಯಂತ್ರಿಸಲು ಲಾಠಿಚಾರ್ಜ್​

    ಬೆಂಗಳೂರು: ಫ್ಲೆಕ್ಸ್ ಮತ್ತು ಬ್ಯಾನರ್ ಹಾಕುವ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಾರಾಮಾರಿ ನಡೆದಿದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವಿಜಯನಗರದ ಎಂ.ಸಿ.ಲೇಔಟ್‌ನ ಬಿಜಿಎಸ್ ಆಟದ ಮೈದಾನದಲ್ಲಿ ಶುಕ್ರವಾರ ನಡೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಪೊಲೀಸರಿಗೆ ಗಾಯಗಳಾಗಿದೆ. ಈ ಸಂಬಂಧ ಎರಡು ಪಕ್ಷದವರು ದೂರು-ಪ್ರತಿದೂರು ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಾಂಗ್ರೆಸ್‌ನ ಮಾಜಿ ಶಾಸಕ ಪ್ರಿಯಾಕೃಷ್ಣ ಬೆಂಬಲಿಗರು ಸಚಿವ ಸೋಮಣ್ಣ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ಕಾರ್ಯಕ್ರಮಕ್ಕಾಗಿ ಅನುಮತಿ ಪಡೆದು ಅಲ್ಲಿ ಯುಗಾದಿ ಉತ್ಸವ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸುತ್ತಿರುವ ಆರೋಪ ಮಾಡಿದ್ದಾರೆ. ಮಾರಾಮಾರಿಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಮತ್ತು ಪೊಲೀಸರಿಗೆ ಗಾಯಗಳಾಗಿದ್ದು, ವಿಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

    ಇದನ್ನೂ ಓದಿ: ಕುಕ್ಕರ್​ ಸ್ಫೋಟ ಪ್ರಕರಣ; ಇನ್ನಿಬ್ಬರು ಶಂಕಿತ ಉಗ್ರರ ವಿರುದ್ಧ ಚಾರ್ಜ್​​ಶೀಟ್​​

    ಮೈದಾನದಲ್ಲಿ ಮಾ.19ರಂದು ಸ್ತ್ರಿ ಶಕ್ತಿ ಮಹಿಳಾ ಸಮಾವೇಶಕ್ಕೆ ನಡೆಯಬೇಕಿತ್ತು. ಆದರೆ ಬೇರೆ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರಿಂದ ಆಕ್ಷೇಪ ವ್ಯಕ್ತವಾಗಿದೆ. ಈ ವೇಳೆ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿದೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಇದನ್ನೂ ಓದಿ: ನಿದ್ರಾಹೀನತೆಯಲ್ಲಿ ಭಾರತಕ್ಕೆ ಎರಡನೇ ಸ್ಥಾನ; ನಿದ್ರಾಹೀನತೆಗೆ ಪ್ರಮುಖ ಕಾರಣವೇ ಇದು!

    ಎಫ್‌ಐಆರ್ ದಾಖಲು: ಈ ಕುರಿತು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಮಾತನಾಡಿ, ವಿಜಯನಗರದ ಎಂ.ಸಿ.ಲೇಔಟ್‌ನ ಬಿಜಿಎಸ್ ಆಟದ ಮೈದಾನದಲ್ಲಿ ಮಾ.19ರಂದು ಸ್ತ್ರೀಶಕ್ತಿ ಮಹಿಳಾ ಸಮಾವೇಶಕ್ಕೆ ಉಮಾಶಂಕರ್ ಎಂಬುವವರು ಬಿಬಿಎಂಪಿಯಿಂದ ಅನುಮತಿ ಪಡೆದಿದ್ದರು. ಈ ಸಮಾವೇಶದ ಸಂಬಂಧ ಒಂದು ಗುಂಪಿನ ಕಾರ್ಯಕರ್ತರು ಬ್ಯಾನರ್ ಮತ್ತು ಬಂಟಿಗ್ಸ್ ಕಟ್ಟುತ್ತಿದ್ದಾಗ ಮತ್ತೊಂದು ಗುಂಪಿನ ಕಾರ್ಯಕರ್ತರು ಬಂದು ಗಲಾಟೆ ಮಾಡಿದ್ದಾರೆ. ಆ ವೇಳೆ ಕೆಲವೊಂದು ಮಹಿಳೆಯರೂ ಶಾಮೀಲಾಗಿದ್ದರು. ಈ ವಿಚಾರವಾಗಿ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಮೈದಾನದಿಂದ ಹೊರಗೆ ಕಳುಹಿಸಿದ್ದರು.

    ಇದನ್ನೂ ಓದಿ: ಭೂಸಿರಿ ಚಿಟ್ಸ್ ಪ್ರೈವೇಟ್​ ಲಿಮಿಟೆಡ್​​ನ ಮತ್ತೊಂದು ಕರ್ಮಕಾಂಡ; ಗ್ರಾಹಕರ 1.6 ಕೋಟಿ ರೂ. ದುರ್ಬಳಕೆ ಆರೋಪ

    ಮೈದಾನದಿಂದ ಹೊರ ಬಂದರೂ ಎರಡೂ ಗುಂಪಿನ ಕಾರ್ಯಕರ್ತರು ಪರಸ್ಪರ ಜಗಳ ಮುಂದುವರಿಸಿ ದೊಣ್ಣೆಯಿಂದ ಹೊಡೆದಾಡಿಕೊಂಡು ನಂತರ ಕಲ್ಲು ತೂರಾಟ ನಡೆಸಿದ್ದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಎರಡೂ ಗುಂಪಿನ ಮೇಲೆ ಲಾಠಿ ಚಾರ್ಜ್ ಮಾಡಿದ್ದರು. ಈ ಗಲಾಟೆಯಲ್ಲಿ ಪೊಲೀಸರಿಗೂ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts