More

    ಮುಂದುವರಿದ ಪುತ್ತೂರು ವಿದ್ಯಾರ್ಥಿಗಳ ಹೊಡೆದಾಟ

    ಪುತ್ತೂರು: ಮಂಗಳವಾರ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದು ಮೂವರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆಗೆ ಸಂಬಂಧಿಸಿ ಮತ್ತೆ ಬುಧವಾರ ವಿದ್ಯಾರ್ಥಿಗಳ ನಡುವಿನ ಹೊಡೆದಾಟ ಮುಂದುವರಿದು ಐವರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ವಿದ್ಯಾರ್ಥಿನಿಯಲ್ಲಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿ ಮಂಗಳವಾರ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಓರ್ವ ವಿದ್ಯಾರ್ಥಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

    ಬಳಿಕದ ಬೆಳವಣಿಗೆಯಲ್ಲಿ ಬುಧವಾರ ಬೆಳಗ್ಗೆ ಎಬಿವಿಪಿ ನೇತೃತ್ವದಲ್ಲಿ ಕಾಲೇಜಿಗೆ ಸಂಬಂಧಪಡದ ಸಂಘಟನೆ ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ, ವಿದ್ಯಾರ್ಥಿನಿಯರಿಗೆ ಪ್ರೀತಿಯ ಆಮಿಷ ತೋರಿಸುವ ವಿಚಾರವನ್ನು ಖಂಡಿಸಿ ಕಾಲೇಜಿನಲ್ಲಿ ನಡೆದ ಗಲಭೆಯ ಸತ್ಯಾಸತ್ಯತೆಯನ್ನು ಸೂಕ್ತವಾಗಿ ಪರಿಶೀಲಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆದಿತ್ತು.

    ಪ್ರತಿಭಟನೆಯ ಬೆನ್ನಲ್ಲೇ ಮತ್ತೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿತ್ತು ಎನ್ನಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಒಂದು ತಂಡದ ಮೂವರು ಗಾಯಾಳು ವಿದ್ಯಾರ್ಥಿಗಳನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಇಬ್ಬರು ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಮೇಲೆ ಮಾರಕ ಆಯುಧಗಳಿಂದ ಹಲ್ಲೆ ನಡೆಸಲಾಗಿದೆ ಎಂದು ಈ ವಿದ್ಯಾರ್ಥಿಗಳು ತಿಳಿಸಿದ್ದಾರೆ.

    ಇನ್ನೊಂದು ತಂಡದ ಇಬ್ಬರು ವಿದ್ಯಾರ್ಥಿಗಳು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಆಗ್ರಹಿಸಿ ಪುತ್ತೂರು ನಗರ ಠಾಣೆಗೆ ವಿದ್ಯಾರ್ಥಿ ಸಂಘಟನೆಗಳ ಮೂಲಕ ದೂರು ನೀಡಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಕಾಲೇಜಿಗೆ ಸಂಬಂಧಪಡದ ವ್ಯಕ್ತಿಗಳು ಬಿಳಿ ಬಣ್ಣದ ಕಾರಿನಲ್ಲಿ ಬಂದು ಕಾಲೇಜು ಬಳಿಕ ಕಾಲುದಾರಿಯಲ್ಲಿ ನಮ್ಮ ಮೇಲೆ ಮಾರಕ ಆಯುಧಗಳಿಂದ ದಾಳಿ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts