16 C
Bangalore
Thursday, December 12, 2019

ಮಹಾಲಕ್ಷ್ಮೀ ಮತಪ್ರಸಾದಕ್ಕೆ ಫೈಟ್

Latest News

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಒಕ್ಕಲಿಗ, ಅಲ್ಪಸಂಖ್ಯಾತರ ಪ್ರಾಬಲ್ಯ ಹೆಚ್ಚಿರುವ ಮಹಾಲಕ್ಷ್ಮೀಲೇಔಟ್ ಕ್ಷೇತ್ರದಲ್ಲಿ ಬಂಡಾಯ, ಹೊಸ ಮುಖ ಹಾಗೂ ಪಕ್ಷಕ್ಕಿಂತ ವ್ಯಕ್ತಿ ಪ್ರಾಬಲ್ಯದ ಗಾಳಿ ಜೋರಾಗಿ ಬೀಸುತ್ತಿದೆ. ಕಾಂಗ್ರೆಸ್ ಹಿಡಿತದಲ್ಲಿದ್ದ ಕ್ಷೇತ್ರವನ್ನು 12 ವರ್ಷಗಳಿಂದ ಜೆಡಿಎಸ್​ನ ಭದ್ರ ಕೋಟೆಯನ್ನಾಗಿಸಿದ ಕೀರ್ತಿ ಸದ್ಯದ ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಕೆ.ಗೋಪಾಲಯ್ಯ ಅವರಿಗೆ ಸಲ್ಲುತ್ತದೆ. ಕ್ಷೇತ್ರದಲ್ಲಿ ಜೆಡಿಎಸ್​ಗಿಂತ ಸ್ವಂತ ವರ್ಚಸ್ಸನ್ನು ಹೆಚ್ಚಿಸಿಕೊಂಡಿರುವ ಗೋಪಾಲಯ್ಯ ವಿರುದ್ಧ ಜೆಡಿಎಸ್ ಗಿರೀಶ್ ಕೆ.ನಾಶಿ ಅವರನ್ನು ಕಣಕ್ಕಿಳಿಸಿದ್ದರೆ, ಕಾಂಗ್ರೆಸ್ ಶಂಕರಮಠ ವಾರ್ಡ್ ಬಿಬಿಎಂಪಿ ಸದಸ್ಯ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಪ್ತ ಎಂ.ಶಿವರಾಜು ಅವರನ್ನು ಅಭ್ಯರ್ಥಿಯನ್ನಾಗಿಸಿದೆ.

ಬಂಡಾಯವೆಂಬ ಬಿಸಿ ತುಪ್ಪ: ಕಳೆದೆರಡು ಅವಧಿಯಲ್ಲಿ ಕ್ಷೇತ್ರದ ಬೇಕು, ಬೇಡವನ್ನರಿತು ಕೆಲಸ ಮಾಡಿರುವ ಗೋಪಾಲಯ್ಯರಿಗೆ ಕೊಂಚ ಉತ್ತಮ ಎನ್ನಬಹುದಾದ ವಾತಾವರಣವಿದೆ. ಆದರೆ, ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಬೇಗುದಿ ಮೇಲ್ನೋಟಕ್ಕೆ ತಗ್ಗಿದಂತೆ ಕಂಡುಬಂದರೂ ಬೂದಿ ಮುಚ್ಚಿದ ಕೆಂಡದಂತೆ ಇನ್ನೂ ಹೊಗೆಯಾಡುತ್ತಲೇ ಇದೆ. ಅದನ್ನು ಶಮನ ಮಾಡದ ಹೊರತು ಗೋಪಾಲಯ್ಯ ಗೆಲುವು ನಿಚ್ಚಳವೆಂದು ಹೇಳಲಾಗದು. ಒಕ್ಕಲಿಗ ಮತಗಳು ಹೆಚ್ಚಿರುವ ಕ್ಷೇತ್ರದಲ್ಲಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರ ಪತನಕ್ಕೆ ಕಾರಣ ಎಂಬ ಆರೋಪ ಗೋಪಾಲಯ್ಯ ಮೇಲಿದ್ದು, ಅದು ಚುನಾವಣೆ ವೇಳೆ ಬಹುಮುಖ್ಯ ಚರ್ಚೆಯ ವಿಷಯವಾಗಿದೆ. ಆ ಅಂಶಗಳು ಗೋಪಾಲಯ್ಯ ಗೆಲುವು ಕಸಿದುಕೊಳ್ಳಬಹುದಾಗಿದೆ.

ಕಾಂಗ್ರೆಸ್ ಪ್ರಬಲ ಪೈಪೋಟಿ: 2013ರಲ್ಲಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದ ಗೋಪಾಲಯ್ಯ ಎದುರು ನೆ.ಲ.ನರೇಂದ್ರಬಾಬು ಸೋಲುವ ತನಕ ಮಹಾಲಕ್ಷ್ಮೀಲೇಔಟ್ ಕಾಂಗ್ರೆಸ್​ನ ಭದ್ರಕೋಟೆ ಎಂದೇ ಬಿಂಬಿತವಾಗಿತ್ತು. 2018ರಲ್ಲೂ ಗೋಪಾಲಯ್ಯ ಗೆಲ್ಲುವ ಮೂಲಕ ಕ್ಷೇತ್ರದ ವಾತಾವರಣವೇ ಬದಲಾಯಿತು. ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾದ ಗೋಪಾಲಯ್ಯ ಸೋಲಿಸಲೇಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್, ಕ್ಚೇತ್ರದಲ್ಲಿ ಸಜ್ಜನ ಎಂದೇ ಗುರುತಿಸಿಕೊಂಡಿರುವ ಶಿವರಾಜುರನ್ನು ಕಣಕ್ಕಿಳಿಸಿದೆ. ಗೋಪಾಲಯ್ಯಗೆ ಇವರೇ ಪ್ರಬಲ ಎದುರಾಳಿ ಎಂಬುದು ಮತದಾರರ ಮಾತಾಗಿದೆ.

ಕ್ಷೇತ್ರದಲ್ಲಿ ಒಕ್ಕಲಿಗರ ಪ್ರಾಬಲ್ಯ: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳ ಪೈಕಿ ಮಹಾಲಕ್ಷ್ಮೀಲೇಔಟ್ ಕೂಡ ಒಂದು. ಯಶವಂತಪುರ ನಂತರ ಅತಿಹೆಚ್ಚು ಒಕ್ಕಲಿಗ ಮತಗಳು ಮಹಾಲಕ್ಷ್ಮೀಲೇಔಟ್​ನಲ್ಲಿವೆ. ಆ ಮತಗಳು ಈ ಬಾರಿ ಯಾರ ಪರ ಚಲಾವಣೆಯಾಗುತ್ತದೆ ಎಂಬುದೇ ಕುತೂಹಲ. ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಮತಗಳು ನಂತರದ ಸ್ಥಾನದಲ್ಲಿದ್ದು, ಗೆಲುವಿನ ನಿರ್ಣಾಯಕ ಮತಗಳಾಗಿವೆ. ಲಿಂಗಾಯತ, ಕುರುಬ ಮತಗಳು ಸಮಾನವಾಗಿದ್ದು, ಅವರ ಒಲವು ಕೂಡ ಅಭ್ಯರ್ಥಿಗಳಿಗೆ ಮುಖ್ಯವಾಗಿದೆ.

ಮರುಸಂಘಟನೆಗೆ ದಳಪತಿಗಳ ಕಸರತ್ತು: ಗೋಪಾಲಯ್ಯ ವಿರುದ್ಧ ಎರಡೆರಡು ಬಾರಿ ಪಕ್ಷಕ್ಕೆ ದ್ರೋಹವೆಸಗಿದ ಆರೋಪ ಮಾಡಿರುವ ಜೆಡಿಎಸ್​ಗೆ ಕ್ಷೇತ್ರ ಉಳಿಸಿಕೊಳ್ಳಲು ಕಸರತ್ತು ಮಾಡಬೇಕಿದೆ. ಕಡೆ ಕ್ಷಣದವರೆಗಿನ ಅಭ್ಯರ್ಥಿ ಆಯ್ಕೆ ಗೊಂದಲ, ಪಕ್ಷದ ವಾರ್ಡ್ ಅಧ್ಯಕ್ಷರು, ಬಿಬಿಎಂಪಿ ಸದಸ್ಯರು ಬಿಜೆಪಿಯತ್ತ ಮುಖ ಮಾಡಿರುವುದು ಕ್ಷೇತ್ರದಲ್ಲಿ ಹೊಸದಾಗಿ ಪಕ್ಷ ಸಂಘಟಿಸಬೇಕಾದ ಪರಿಸ್ಥಿತಿ ನಿರ್ವಣವಾಗಿದೆ. ಅದರ ನಡುವೆಯೇ ಗಿರೀಶ್ ಕೆ. ನಾಶಿ ಕಣಕ್ಕಿಳಿಸಲಾಗಿದೆ. 2018ರ ಚುನಾವಣೆ ವೇಳೆ ಕಾಂಗ್ರೆಸ್​ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಗಿರೀಶ್ ಕೆ.ನಾಶಿ, ಕ್ಷೇತ್ರದಲ್ಲಿ ಸಾಕಷ್ಟು ಪರಿಚಿತರು. ಆದರೂ, ನೆಲೆಯಿಲ್ಲದಂತಾಗಿರುವ ಜೆಡಿಎಸ್​ಗೆ ಮತ ಹಾಕುವಂತೆ ಮಾಡಲು ಹರಸಾಹಸ ಪಡಬೇಕಿದೆ.

ಪ್ರಮುಖ ಮೂರು ಅಂಶಗಳು

1)ಗೋಪಾಲಯ್ಯ ಕ್ಷೇತ್ರದಲ್ಲಿ ವೈಯಕ್ತಿಕ ಪ್ರಭಾವ ಹೊಂದಿದ್ದರೂ, ಬಿಜೆಪಿ ಅಭ್ಯರ್ಥಿ ಎಂಬ ಕಾರಣಕ್ಕೆ ಅಲ್ಪಸಂಖ್ಯಾತ ಮತಗಳ ಗಳಿಕೆ ಕಷ್ಟಸಾಧ್ಯ.

2) ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಬೀಳಿಸಿದ ಆರೋಪ ಗೋಪಾಲಯ್ಯ ಮೇಲಿದ್ದು, ಒಕ್ಕಲಿಗರು ಮುನಿಸಿಕೊಂಡಿರುವುದು.

3) ಬಿಬಿಎಂಪಿಯ ಜೆಡಿಎಸ್ ಸದಸ್ಯರಲ್ಲಿ ಇಬ್ಬರು ಗೋಪಾಲಯ್ಯಗೆ ಬೆಂಬಲ ಸೂಚಿಸಿರುವುದು, ಜೆಡಿಎಸ್ ಅಭ್ಯರ್ಥಿಗೆ ಹಿನ್ನಡೆ ಆಗಬಹುದು.

2 ಬಾರಿ ಶಾಸಕನಾಗಿ ಕ್ಷೇತ್ರದಲ್ಲಿ ಮಾಡಿರುವ ಕಾರ್ಯದ ಬಗ್ಗೆ ಜನರಿಗೆ ಒಲವಿದೆ. ಬಿಜೆಪಿ ಬಲವೂ ಸೇರಿದ್ದು, ಈ ಬಾರಿಯೂ ನನ್ನ ಗೆಲುವು ಖಚಿತ.

| ಕೆ.ಗೋಪಾಲಯ್ಯ ಬಿಜೆಪಿ ಅಭ್ಯರ್ಥಿ

ಜನ ನೀಡಿದ ತೀರ್ಪನ್ನು ತಿರಸ್ಕರಿಸಿದವರಿಗೆ ಉಪಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ. ಮತ್ತೊಮ್ಮೆ ಕ್ಷೇತ್ರವನ್ನು ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಲಿದೆ. ಪಕ್ಷಾಂತರಿಗಳ ಸೋಲು ಮತ್ತು ನನ್ನ ಗೆಲುವು ನಿಶ್ಚಿತ.

| ಎಂ.ಶಿವರಾಜು ಕಾಂಗ್ರೆಸ್ ಅಭ್ಯರ್ಥಿ

ಒಟ್ಟು ಮತದಾರರು

2,83,885

ಪುರುಷರು

1,46,415

ಮಹಿಳೆಯರು

1.37.428

ಇತರ

42

ಗಿರೀಶ್ ಗರಗ ಬೆಂಗಳೂರು

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...