VIDEO| ಸೀಟಿಗಾಗಿ ಬಡಿದಾಡಿಕೊಂಡ ಮಹಿಳೆಯರು; ಬಸ್​ನಲ್ಲಿ ನಾರಿಶಕ್ತಿ ಅನಾವರಣ ಎಂದ ನೆಟ್ಟಿಗರು

KSRTC Bus
Published on

ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆಗೆ ರಾಜ್ಯದ್ಯಂತ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್​ ದೊರೆತ್ತಿದ್ದು, ಬಸ್​ನಲ್ಲಿ ಪ್ರಯಾಣಿಸಲು ನೂಕುನುಗ್ಗಲು ಉಂಟಾಗುತ್ತಿದೆ.

ಕೆಲವೆಡೆ ಮಹಿಳೆಯರು ಬಸ್​ ಹತ್ತುವಾಗ ಡೋರ್​, ಕಿಟಕಿಯ ಸರಳುಗಳು ಕಿತ್ತುಕೊಂಡು ಬಂದಿರುವ ಫೋಟೋ ಹಾಗು ವಿಡಿಯೋವನ್ನು ನಾವು ನೋಡಿದ್ದೇವೆ. ಇದೀಗ ಕಳಿತುಕೊಳ್ಳುವ ವಿಚಾರವಾಗಿ ಮಹಿಳೆಯರಿಬ್ಬರು ನಡುವೆ ಹೊಡೆದಾಟವಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಘಟನೆಯೂ ಮೈಸೂರು ಸಿಟಿ ಬಸ್​ ನಿಲ್ದಾಣದಲ್ಲಿ ನಡೆದಿದೆ.

ವಿಡಿಯೋ ವೈರಲ್​​

ಆಷಾಢ ಮಂಗಳವಾರ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ತೆರಳಲೆಂದು ಮಹಿಳೆಯೊಬ್ಬರು ಕಿಟಕಿ ಮೂಲಕ ಸೀಟಿಗೆ ಕರವಸ್ತ್ರ ಹಾಕಿ ಕಾಯ್ದಿಸಿದ್ದಾರೆ. ಇದನ್ನು ಗಮನಿಸಿದ ಮತ್ತೋರ್ವ ಮಹಿಳೆ ಸೀಟಿನ ಮೇಲೆ ಹಾಕಲಾಗಿದ್ದ ಕರ್ಚೀಫ್​ ಅನ್ನು ತೆಗೆದು ಬಿಸಾಡಿದ್ಧಾರೆ.

ಇದನ್ನು ಗಮನಿಸಿದ ಮಹಿಳೆ ಈ ವಿಚಾರ ಇಬ್ಬರ ನಡುವಿನ ಗದ್ದಲಕ್ಕೆ ಕಾರಣವಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಇಬ್ಬರು ನೀರೆಯರು ಹೊಡೆದಾಡಿಕೊಂಡಿದ್ಧಾರೆ. ಇನ್ನು ಘಟನೆಯ ವಿಡಿಯೋ ವೈರಲ್​ ಆಗಿದ್ದು, ನಿಜವಾದ ನಾರಿ ಶಕ್ತಿ ಅನಾವರಣ ಆಯಿತು ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net