

ಬೆಳಗಾವಿ:ಕಿಟಕಿ ಪಕ್ಕದ ಸೀಟ್‌ಗಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಟಿ ಬಸ್ ಟರ್ಮಿನಲ್ಗೆ ಬರುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿ ಹಾಗೂ ಯುವಕರ ನಡುವೆ ಕಿಟಕಿ ಪಕ್ಕದ ಸೀಟ್‌ಗಾಗಿ ಜಗಳ ಉಂಟಾಗಿದೆ. ಸೀಟ್‌ಗಾಗಿ ನಡೆದ ಜಗಳದಿಂದ ಚಾಕು ಇರಿತ ಸಂಭವಿಸಿದೆ.
ಪಂತಬಾಳೇಕುಂದ್ರಿ-ಸಿಬಿಟಿ ಬಸ್‌ನಲ್ಲಿ ಬೆಳಗಾವಿ ನಗರಕ್ಕೆ ಬರುತ್ತಿದ್ದಾಗ, ಕಿಟಕಿ ಸೀಟಿನ ವಿಚಾರವಾಗಿ ಮಾಜ್ ಮತ್ತು ಕೆಲವು ಅಪರಿಚಿತ ಯುವಕರ ಮಧ್ಯೆ ವಾಗ್ವಾದ ನಡೆದಿತ್ತು. ಈ ಜಗಳ ವಿಕೋಪಕ್ಕೆ ಹೋಗಿದ್ದರಿಂದ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.
ಮಜ್ಜು ಸನದಿ (20) ಎಂಬ ಯುವಕನ ಎದೆ ಭಾಗಕ್ಕೆ ಯುವಕರ ಗ್ಯಾಂಗ್ ಒಂದು ಚಾಕು ಇರಿದು ಪರಾರಿ ಆಗಿದೆ. ಗಾಯಾಳು ಮಜ್ಜುಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆ ಐಸಿಯುನಲ್ಲಿ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
(ಏಜೆನ್ಸೀಸ್)
ಇನ್ನೂ ಈ ಬಗ್ಗೆ ಪೊಲೀಸ್ ಉಪ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ರೋಹನ್ ಜಗದೀಶ ಮಾತನಾಡಿದ್ದು, ಆರೋಪಿಗಳ ಪತ್ತೆಗೆ ಕ್ರಮ ವಹಿಸಿದ್ದೇವೆ. ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.