22.5 C
Bengaluru
Sunday, January 19, 2020

ಸಚಿವಾಲಯ ಸ್ಥಳಾಂತರ ಆಗುವ ತನಕ ಹೋರಾಟ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ಬೆಂಗಳೂರಿನ ಸಚಿವಾಲಯದ ಕಚೇರಿಗಳನ್ನು ಸ್ಥಳಾಂತರ ಮಾಡುವವರೆಗೆ ಮತ್ತು ಬೆಳಗಾವಿಯನ್ನು 2ನೇ ರಾಜಧಾನಿ ಎಂದು ಅಧಿಕೃತ ಘೋಷಣೆ ಆಗುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷ ಅಶೋಕ ಪೂಜಾರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9 ನಿಗಮ ಮಂಡಳಿಗಳ ಕಚೇರಿಗಳನ್ನು ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಸ್ಥಳಾಂತರಿಸುವ ನಿರ್ಣಯವನ್ನು ಸ್ವಾಗತಿಸಿದ ಅವರು, ಇದೊಂದು ಉತ್ತಮ ಬೆಳವಣಿಗೆ. ಉತ್ತರ ಕರ್ನಾಟಕದ ಜನರ ಭಾವನೆಗಳಿಗೆ ಸ್ಪಂದಿಸುವ ಕ್ರಮವಾಗಿದೆ. ಆದರೆ, ಇಷ್ಟಕ್ಕೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಸುವರ್ಣ ವಿಧಾನಸೌಧಕ್ಕೆ ಸಚಿವಾಲಯದ ಕಚೇರಿಗಳನ್ನು ಸ್ಥಳಾಂತರಿಸಿ ಅದನ್ನು ಶಕ್ತಿ ಕೇಂದ್ರವನ್ನಾಗಿ ರೂಪಿಸಬೇಕು. ಈ ಭಾಗದ ನಿರ್ಣಯಗಳನ್ನು ಸುವರ್ಣ ಸೌಧದಲ್ಲಿಯೇ ತೆಗೆದುಕೊಳ್ಳಬೇಕು ಎಂಬುದು ನಮ್ಮ ಬೇಡಿಕೆ. ಈ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದರು.

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ರಾಜ್ಯ ಸರ್ಕಾರ 9 ಕಚೇರಿಗಳನ್ನು ಸ್ಥಳಾಂತರ ಮಾಡುವ ನಿರ್ಣಯಕ್ಕೆ ಈ ಭಾಗದ ಮಠಾಧೀಶರ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ. ಆದರೆ, ಸುವರ್ಣ ಸೌಧಕ್ಕೆ ಪ್ರಮುಖ ಕಚೇರಿಗಳನ್ನು ಸ್ಥಳಾಂತರಿಸಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಅವು ಸ್ಥಳಾಂತರವಾಗುವವರೆಗೆ ಸುವರ್ಣ ಸೌಧ ಪ್ರವೇಶಿಸಬಾರದು ಎಂದು ಮಠಾಧೀಶರು ಸಂಕಲ್ಪ ಮಾಡಿದ್ದೇವೆ. ಆದಷ್ಟು ಬೇಗ ಕಚೇರಿಗಳನ್ನು ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು. ಕಾರಂಜಿಮಠದ ಗುರುಸಿದ್ದ ಸ್ವಾಮೀಜಿ, ಕಲ್ಯಾಣರಾವ್ ಮುಚಳಂಬಿ, ಆರ್.ಎಸ್.ದರ್ಗೆ, ಎಂ.ಟಿ.ಪಾಟೀಲ, ಬಸವರಾಜ ಬಾಗೋಜಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...