More

    ಸಾಮಾಜಿಕ ಅಂತರ ನಿಯಮ ಮರೆತು ಹೊಡೆದಾಟ; ಗ್ರಾಪಂ ಕಚೇರಿಯಲ್ಲಿ ಎಡವಟ್ಟು

    ಹಾಸನ: ಕರೊನಾ ವೈರಸ್​ ವ್ಯಾಪಕವಾಗಿ ಹರಡುತ್ತಿರುವುದರಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಸರ್ಕಾರ, ವೈದ್ಯರು, ತಜ್ಞರು ಸಾರಿ ಸಾರಿ ಹೇಳುತ್ತಿದ್ದಾರೆ. ಆದರೆ ಇಲ್ಲೊಂದು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಈ ನಿಯಮವನ್ನು ಉಲ್ಲಂಘನೆ ಮಾಡಲಾಗಿದೆ..ಅದೂ ಕೂಡ ಪರಸ್ಪರ ಗುಂಪಾಗಿ ಬಡಿದಾಡಿಕೊಳ್ಳುವ ಮೂಲಕ !
    ಚೆನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದೆ. ಸಭೆಯಲ್ಲಿ ಭಾಗವಹಿಸಿದ್ದ ಅಧ್ಯಕ್ಷರು, ಪಿಡಿಒ ಮತ್ತು ಸ್ಥಳೀಯರ ಮಧ್ಯೆ ಹೊಡೆದಾಟ ನಡೆದಿದೆ.

    ಕೆಂಬಾಳು ಗ್ರಾಮದಲ್ಲಿರುವ ಅಂಗಡಿಗಳಿಗೆ ಶುಲ್ಕ ವಿಧಿಸುವ ಸಂಬಂಧ ಚರ್ಚೆ ಮಾಡಲು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಭೆ ಕರೆಯಲಾಗಿತ್ತು. ಅಧ್ಯಕ್ಷ ಮಂಜುನಾಥ್​ ನೇತೃತ್ವ ವಹಿಸಿದ್ದರು. ಆದರೆ ಈ ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಹೆಸರಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಗ್ರಾಪಂ ಅಧ್ಯಕ್ಷ, ಪಿಡಿಒ ವಿರುದ್ಧ ಹರಿಹಾಯ್ದರು.

    ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಪಠ್ಯ ಪುನರ್ಮನನಕ್ಕೆ ಫೋನ್‌ಔಟ್ ಕಾರ್ಯಕ್ರಮ

    ಕಾಮಗಾರಿಯಲ್ಲಿ ಅವ್ಯವಹಾರ ಮಾಡಿದ್ದು ಸಾಲದೆಂದು ಈಗ ಅಂಗಡಿಗಳಿಂದಲೂ ಹಣ ವಸೂಲಿ ಮಾಡಲು ನಿರ್ಧರಿಸಿದ್ದೀರಾ ಎಂದು ವಾಗ್ದಾಳಿ ನಡೆಸಿದರು. ಈ ವೇಳೆ ಮಾತಿಗೆ ಮಾತು ಬೆಳೆದು ಹೊಡೆದಾಟವೇ ಶುರುವಾಯಿತು. ಸ್ಥಳೀಯರೆಲ್ಲ ಸೇರಿ ಗ್ರಾಪಂ ಅಧ್ಯಕ್ಷ, ಪಿಡಿಒ ಮೇಲೆ ಹಲ್ಲೆ ಮಾಡಲು ಪ್ರಾರಂಭ ಮಾಡಿದರು.
    ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ನಿಯಂತ್ರಣ ಮಾಡಿದ್ದಾರೆ. ಕಾರೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಇದನ್ನೂ ಓದಿ: ನಾಳೆ ರಾಜ್ಯಾದ್ಯಂತ ಬಸ್ ಸಂಚಾರ ಆರಂಭ ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts