ಬಿಜೆಪಿಗೆ ಮತ ಹಾಕದಂತೆ ಆಣೆ ಪ್ರಮಾಣ ಮಾಡಿಸಿದ ಸ್ವಾಮೀಜಿ ವಿರುದ್ಧ ದೂರು ದಾಖಲು!

Swamiji vs BJP
Published on

ಗದಗ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಂತೆ ಆಣೆ ಪ್ರಮಾಣ ಮಾಡಿಸಿದ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದೆ.

ಬಿಜೆಪಿ ಪಕ್ಷವನ್ನು ತಿರಸ್ಕಾರ ಮಾಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಮತ ಹಾಕುವಂತೆ ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗವಿಮಠದ ಶ್ರೀ ಕುಮಾರ ಮಹಾರಾಜ ಸ್ವಾಮಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ.

ಸ್ವಾಮೀಜಿ ಕರೆ

ಒಳ ಮೀಸಲಾತಿ ವಿರೋಧಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಸ್ವಾಮೀಜಿ ಕರೆ ನೀಡಿದ್ದರು. ಅಲ್ಲದೆ, ಆದರಹಳ್ಳಿ ಗ್ರಾಮಸ್ಥರಿಂದ ಸೇವಾಲಾಲ ಹಾಗೂ ಸಿದ್ದರಾಮೇಶ್ವರ‌ ದೇವರ ಮೇಲೆ ಆಣೆ ಪ್ರಮಾಣ‌ ಮಾಡಿಸಿದ್ದರು.

ನೀತಿ ಸಂಹಿತೆ ಉಲ್ಲಂಘನೆ ಆರೋಪ

ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಲಕ್ಷ್ಮೇಶ್ವರ ಪೊಲೀಸ್​ ಠಾಣೆಯಲ್ಲಿ ಸ್ವಾಮೀಜಿಗಳ ವಿರುದ್ಧ ದೂರು ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net