More

    ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸುವ ಕಾರ್ಯ ಚುರುಕು: ಅಂತರ್ಜಲ ಹೆಚ್ಚಳಕ್ಕೆ ಅಗತ್ಯ ಕ್ರಮ

    ಬೆಂಗಳೂರು: ನಗರದಲ್ಲಿ ಅಂತರ್ಜಲ ಕುಸಿತದಿಂದ ನೀರಿನ ಕೊರತೆ ಉಂಟಾಗಿದೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ನಗರದಲ್ಲಿ ಅಂತರ್ಜಲ ಮರುಪೂರಣಕ್ಕೆ ಜಲಮಂಡಳಿಯ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಂಡಳಿ ಅಧ್ಯಕ್ಷ ಡಾ.ವಿ.ರಾಮ್​ ಪ್ರಸಾತ್​ ಮನೋಹರ್​ ತಿಳಿಸಿದ್ದಾರೆ.

    ವೃಷಭಾವತಿ ವ್ಯಾಲಿಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಟಕ, ನಾಯಂಡಹಳ್ಳಿ ಕೆರೆ, ಕೆಂಗೇರಿ ಎಸ್​.ಟಿ.ಪಿ, ಮಂಡಳಿ ವತಿಯಿಂದ ಸಂಸ್ಕರಿಸಿದ ನೀರನ್ನು ಕೆಂಗೇರಿ ಕೆರೆಗೆ ತುಂಬಿಸಲು ಕೈಗೊಂಡಿರುವ ಕಾಮಗಾರಿಯ ಸ್ಥಳ ಪರಿಶೀಲನೆ, ಮಂಡಳಿ ವತಿಯಿಂದ ಸಂಸ್ಕರಿಸಿದ ನೀರನ್ನು ದುಬಾಸಿಪಾಳ್ಯ, ಹೊಸಹಳ್ಳಿಕೆರೆ ಹಾಗೂ ಅಲಗೆವಡೆರಹಳ್ಳಿ ಕೆರೆಗೆ ತುಂಬಿಸುವ ಸಲುವಾಗಿ ನಡೆಸುತ್ತಿರುವ ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು.

    ನಗರದಲ್ಲಿ ಅವ್ಯಾಹತವಾಗಿ ಅಂತರ್ಜಲದ ಬಳಕೆಯಾಗುತ್ತಿದೆ. ಸಮರ್ಪಕವಾದ ಮಳೆ ನೀರು ಮರುಪೂರಣ ವ್ಯವಸ್ಥೆ ಮಾಡದೇ ಇರುವ ಹಿನ್ನಲೆಯಲ್ಲಿ ಹೆಚ್ಚಿನ ಪ್ರಮಾಣದ ನೀರು ಒಳಚರಂಡಿಗೆ ಹರಿಯುತ್ತಿದೆ. ಇದು ಒಳಚರಂಡಿಯ ವ್ಯವಸ್ಥೆಯ ಮೇಲೆ ಒತ್ತಡ ಹೆಚ್ಚಿಸುತ್ತಿದೆ. ಅಲ್ಲದೇ, ಅಂತರ್ಜಲ ಮರುಪೂರಣ ಸರಿಯಾದ ರೀತಿಯಲ್ಲಿ ಆಗುತ್ತಿಲ್ಲ. ಈ ಕೊರತೆ ತಪ್ಪಿಸಲು ಹಾಗೂ ಭವಿಷ್ಯದ ನೀರಿನ ಅವಶ್ಯಕತೆ ಪೂರೈಸಲು ಅಂತರ್ಜಲ ಮರುಪೂರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

    ನೀರು ತುಂಬಿಸುವ ಕಾರ್ಯ ಚುರುಕು

    ಎರಡನೇ ಹಂತದಲ್ಲಿ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ ನಾಯಂಡಹಳ್ಳಿ ಕೆರೆ ಸೇರಿದಂತೆ 14 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕೆರೆಗಳಿಗೆ ನೀರನ್ನು ತುಂಬಿಸುವುದು ನಮ್ಮ ಗುರಿಯಾಗಿದೆ. ಕೆಂಗೇರಿ ಕೆರೆ, ದುಬಾಸಿ ಪಾಳ್ಯ, ಹೊಸಹಳ್ಳಿ ಕೆರೆ ಹಾಗೂ ಅಲಗೆವಡೆರಹಳ್ಳಿ ಕೆರೆಗೆ ನೀರು ತುಂಬಿಸುವಂತಹ ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್​ ಪ್ರಸಾತ್​ ಮನೋಹರ್​ ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts