ಲೈಂಗಿಕ ಕಿರುಕುಳ ಪ್ರಕರಣ: ನಿರ್ದೇಶಕ ವಿ.ಕೆ ಪ್ರಕಾಶ್​ಗೆ ಜಾಮೀನು ಮಂಜೂರು

ಕೊಲ್ಲಂ (ಕೇರಳ): ಖ್ಯಾತ ಚಲನಚಿತ್ರ ನಿರ್ದೇಶಕ ವಿ.ಕೆ ಪ್ರಕಾಶ್ ಅವರಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕೇರಳ ಹೈಕೋರ್ಟ್​ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ: “ಜಮ್ಮು ಮತ್ತು ಕಾಶ್ಮೀರದ ಮತ್ತೊಂದು ಪೀಳಿಗೆಯನ್ನು ನಾಶಮಾಡಲು ಬಿಡುವುದಿಲ್ಲ; ಪ್ರಧಾನಿ ಮೋದಿ

ಪ್ರಕಾಶ್ ಅವರನ್ನು ಎರಡು ದಿನಗಳ ಕಾಲ ವಿಚಾರಣೆಗೆ ಗುರಿಪಡಿಸಿದ್ದ ಪಳ್ಳಿತೋಟ್ಟಂ ಪೊಲೀಸರು ಹೈಕೋರ್ಟ್‌ನ ನಿರ್ದೇಶನಕ್ಕೆ ಅನುಗುಣವಾಗಿ ಜಾಮೀನು ನೀಡಿದ್ದಾರೆ. “ನಾವು ಅವರನ್ನು ಕಳೆದ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ್ದೇವೆ. ನಂತರ ಹೈಕೋರ್ಟ್ ನಿರ್ದೇಶನದಂತೆ ಅವರಿಗೆ ಜಾಮೀನು ನೀಡಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.

ಪ್ರಕಾಶ್ ಅವರು 2022ರ ಏಪ್ರಿಲ್‌ನಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಮಹಿಳೆಯೊಬ್ಬರು ಆರೋಪಿಸಿದ್ದರು. ಈ ಮಹಿಳೆಯು ಚಿತ್ರಕಥೆಗಳಿಗೆ ಬರೆಯುವ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಿನಿಮಾ ಚಿತ್ರಕಥೆಯನ್ನು ವಿವರಿಸಲು ಪ್ರಕಾಶ್ ಬಳಿ ತೆರಳಿದ್ದ ಸಂದರ್ಭದಲ್ಲಿ ಈ ದೌರ್ಜನ್ಯ ನಡೆದಿತ್ತು ಎಂದು ಮಹಿಳೆ ಆರೋಪ ಮಾಡಿದ್ದಾರೆ.

ನ್ಯಾಯಮೂರ್ತಿ ಕೆ.ಹೇಮಾ ಸಮಿತಿಯ ವರದಿಯು ಬಹಿರಂಗವಾದ ನಂತರದಲ್ಲಿ ಈ ಮಹಿಳೆಯು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಆದರೆ ಈ ಆರೋಪಗಳನ್ನು ಪ್ರಕಾಶ್ ಅವರು ಖಂಡಿಸಿದ್ದು, ಕಥೆಯು ಸಿನಿಮಾ ಮಾಡಲು ಸೂಕ್ತವಾಗಿಲ್ಲ ಎಂದು ಆ ಮಹಿಳೆಗೆ ಹೇಳಿದ ನಂತರ ತಮ್ಮ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ಪ್ರಕಾಶ್ ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಾಲಯ ವಿಧಿಸುವ ಕಠಿಣ ಷರತ್ತುಗಳನ್ನು ಪಾಲಿಸಲು ಹಾಗೂ ತನಿಖಾಧಿಕಾರಿಯ ಜೊತೆ ಸಹಕರಿಸಲು ಆರೋಪಿಯು ಸಿದ್ಧವಿರುವಾಗ ಅವರನ್ನು ಬಂಧಿಸಿ ವಿಚಾರಣೆಗೆ ಗುರಿಪಡಿಸುವ ಅಗತ್ಯ ಇಲ್ಲ ಎಂದು ಕೇರಳ ಹೈಕೋರ್ಟ್​ ಜಾಮೀನು ನೀಡುವಾಗ ಹೇಳಿದೆ. ಜೊತೆಗೆ ಅಗತ್ಯವಿದ್ದರೆ ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿಚಾರಣೆ ನಡೆಸಬೇಕು ಮತ್ತು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

Breaking News | ತಿರುಪತಿ ಲಡ್ಡುಗೆ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿದ್ದು ಕನ್ಫರ್ಮ್! ಸಾಕ್ಷ್ಯ ಮುಂದಿಟ್ಟ ಟಿಡಿಪಿ!

Share This Article

Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…

ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…