More

    ಸಿನಿಮಾ ಶೂಟಿಂಗ್ ಪ್ರಾರಂಭಿಸಲು ಮುಖ್ಯಮಂತ್ರಿಗಳಿಗೆ ಮನವಿ …

    ಕಿರುತೆರೆಯಂತೆ ಸಿನಿಮಾ ಚಿತ್ರೀಕರಣಕ್ಕೂ ಅನುಮತಿ ನೀಡಬೇಕು ಎಂದು ಕನ್ನಡ ಚಿತ್ರರಂಗದ ನಿಯೋಗವೊಂದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನೂ ಭೇಟಿ ಮಾಡಿ ಮನವಿ ಸಲ್ಲಿಸಿದೆ.

    ಇದನ್ನೂ ಓದಿ: ಮಿಸ್ ಯೂ ಮಾಮ … ಅಂಬರೀಷ್ ನೆನೆದ ಸುದೀಪ್

    ಲಾಕ್‌ಡೌನ್‌ನಿಂದಾಗಿ ಚಿತ್ರೀಕರಣ ಚಟುವಟಿಕೆಗಳು ಎರಡು ತಿಂಗಳುಗಳಿಂದ ನಿಂತಿವೆ. ಚಿತ್ರೀಕರಣ ಚಟುವಟಿಕೆಗಳು ನಿಂತಿರುವುದರಿಂದ, ಅದನ್ನೇ ನಂಬಿಕೊಂಡಿರುವ ಸಾವಿರಾರು ಜನ ಸಂಕಷ್ಟಕ್ಕೊಳಗಾಗಿದ್ದಾರೆ. ಈ ನಿಟ್ಟಿನಲ್ಲಿ ಚಿತ್ರೀಕರಣಕ್ಕೆ ಅವಕಾಶ ನೀಡಬೇಕು ಎಂದು ಕಿರುತೆರೆಯವರು ಮೊದಲು ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ ಸರ್ಕಾರವು, ಮೇ 25ರಿಂದ ಕಿರುತೆರೆ ಚಿತ್ರೀಕರಣ ಪ್ರಾರಂಭಿಸಬಹುದು ಎಂದು ಆದೇಶ ನೀಡಿತ್ತು.

    ಈಗ ಜೂನ್ ಒಂದರಿಂದ ಹಲವು ಉದ್ಯಮಗಳು ಪ್ರಾರಂಭವಾಗುತ್ತಿರುವುದರಿಂದ, ಚಲನಚಿತ್ರಗಳ ಚಿತ್ರೀಕರಣ ಮತ್ತು ಪ್ರದರ್ಶನಕ್ಕೆ ಅನುಮತಿ ನೀಡಬೇಕು ಎಂದು ಕನ್ನಡ ಚಿತ್ರರಂಗದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಇದರ ಜತೆಗೆ, ಸಂಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರಿಗೆ ಒಂದಿಷ್ಟು ನೆರವು ನೀಡುವುದಕ್ಕೂ ಸರ್ಕಾರವನ್ನು ಕೇಳಿಕೊಳ್ಳಲಾಗಿದೆ. ಮನವಿಯನ್ನು ಸ್ವೀಕರಿಸಿರುವ ಮುಖ್ಯಮಂತ್ರಿಗಳು, ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

    ಇದನ್ನೂ ಓದಿ: ಗೋಸ್​ ಟು ಕಾನ್ಸ್​ಗೆ ಪೆಡ್ರೋ

    ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣದಲ್ಲಿ ಈ ಸಭೆ ನಡೆದಿದ್ದು, ಈ ಸಭೆಯಲ್ಲಿ ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, ಮಾಜಿ ಅಧ್ಯಕ್ಷರಾದ ಸಾ.ರಾ. ಗೋವಿಂದು, ಕೆ.ವಿ. ಚಂದ್ರಶೇಖರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

    PHOTO GALLERY| ಸರಳವಾಗಿ ನಡೆಯಿತು ಅಂಬಿ ಹುಟ್ಟುಹಬ್ಬ: ರೆಬೆಲ್​ ಸ್ಟಾರ್​ ನೆನೆದ ಅಭಿಮಾನಿಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts