ಅಕ್ರಮ ಹಣ ವರ್ಗಾವಣೆ; ಸಿನಿಮಾ ನಿರ್ಮಾಣ ಸಂಸ್ಥೆ ಮೇಲೆ ಇಡಿ ದಾಳಿ

enforcement directorate
Published on

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸಿದ್ಧ ಸಿನಿಮಾ ನಿರ್ಮಾಣ ಸಂಸ್ಥೆ LYCA ಪ್ರೊಡಕ್ಷನ್ಸ್​ ಮೇಲೆ ಜಾರಿ ನಿರ್ದೇಶನಾಲಯ(ED) ದಾಳಿ ಮಾಡಿದೆ.

ನಗರದ ಎಂಟು ಕಡೆ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿದ್ದು ಶೋಧ ಕಾರ್ಯಾಚರನೆಯಲ್ಲಿ ತೊಡಗಿದ್ದಾರೆ ಮತ್ತು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ನಗದು-ಆಭರಣ ವಶಕ್ಕೆ

ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಲಿವುಡ್​ನ ಪ್ರಸಿದ್ಧ ಚಿತ್ರ ನಿರ್ಮಾಣ ಸಂಸ್ಥೆಗಳ ಕಚೇರಿ ಮೇಲೆ ದಾಳಿ ನಡೆಸಿ 200ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತದ ಅಘೋಷಿತ ಆದಾಯವನ್ನು ಪತ್ತೆ ಮಾಡಿತ್ತು.

ಕಳೆದ ವರ್ಷದ ದಾಳಿಯ ವೇಳೆ 29 ಕೋಟಿ ರೂಪಾಯಿ ನಗದು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗುತ್ತು. ಮಂಗಳವಾರ ನಡೆದಿರುವ ದಾಳಿ ಇದಕ್ಕೆ ಸಂಬಂಧಿಸಿರಬಹುದ ಎಂದು ಶಂಕಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net