ಫಿಲೊಮಿನಾದ ೭ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ - ಜಿಲ್ಲಾಮಟ್ಟದ ಈಜು ಸ್ಪರ್ಧೆ

PTR_7 AUG_2
Published on

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಪುತ್ತೂರಿನ ಡಾ. ಶಿವರಾಮ ಕಾರಂತ ಬಾಲವನ ಈಜುಕೊಳದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ೨೦೨೪-೨೫ರಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ೭ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಹಾಗೂ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂದಿರುತ್ತಾರೆ.


ದ್ವಿತೀಯ ವಿಜ್ಞಾನ ವಿಭಾಗದ ನಂದನ್ ನಾಯ್ಕ್ ೪ ಬೆಳ್ಳಿ, ಪ್ರಾರ್ಥನಾ ಬಿ ೩ ಬೆಳ್ಳಿ, ಪ್ರಥಮ ವಿಜ್ಞಾನ ವಿಭಾಗದ ದಿಗಂತ್ ವಿ ಎಸ್ ೩ ಚಿನ್ನ ೨ ಬೆಳ್ಳಿ, ಆರ್ ಅಮನ್ ರಾಜ್ ೪ ಬೆಳ್ಳಿ ೧ ಕಂಚು, ಅನ್ವಿತ್ ರೈ ೫ ಬೆಳ್ಳಿ, ಪ್ರಽ ಕ್ಲಾರೆ ಪಿಂಟೋ ೩ ಚಿನ್ನ ೨ ಬೆಳ್ಳಿ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ತನುಶ್ರೀ ಎಸ್ ಗೌಡ ೧ ಚಿನ್ನ ೨ ಬೆಳ್ಳಿ ಪದಕವನ್ನು ಪಡೆದುಕೊಂಡು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ದ್ವಿತೀಯ ವಾಣಿಜ್ಯ ವಿಭಾಗದ ಸಿಂಚನ ಕೆ ೨ ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದಾರೆ.


ಪಾರ್ಥ ವಾರಣಾಸಿ, ನಿರೂಪ ಜಿ ಆರ್, ರೋಹಿತ್ ಪ್ರಕಾಶ್, ದೀಕ್ಷಿತ್ ರಾವ್ ತರಬೇತಿ ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲ ಅಶೋಕ್ ರಾಯನ್ ಕ್ರಾಸ್ತಾ, ದೈಹಿಕ ಶಿಕ್ಷಣ ನಿರ್ದೇಶಕರಾದ ಏಲಿಯಾಸ್ ಪಿಂಟೋ, ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net